Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಗೆ ಆಗ್ರಹ

ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಗೆ ಆಗ್ರಹ

ಉಡುಪಿ: ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಗೆ ತರುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವ ಜನಸಂಖ್ಯೆ ದಿನ ಅಂಗವಾಗಿ ಹೊಸ ಜನಸಂಖ್ಯೆ ನೀತಿ ಘೋಷಿಸಿರುವುದು ಸ್ವಾಗತಾರ್ಹ.

ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಗೆ ಬರಬೇಕು. ಅದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಬಡತನ ನಿವಾರಣೆ, ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೇವೆ ಜೊತೆಗೆ ಹೊಸ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಸಹಕಾರಿಯಾಗಲಿದೆ ಎಂದು ಕುಯಿಲಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!