ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************
(ಸುದ್ದಿಕಿರಣ ವರದಿ)
ಉಡುಪಿ, ಜು. 10: ಕಾಂಗ್ರೆಸ್ ಕಾರ್ಯಕರ್ತ ಹಿರ್ಗಾನ ರಾಧಾಕೃಷ್ಣ ನಾಯಕ್ ಎಂಬವರನ್ನು ಒಂದು ವರ್ಷದ ಹಿಂದಿನ ಪ್ರಕರಣವನ್ನು ಕಾರಣವಾಗಿಸಿಕೊಂಡು, ಠಾಣೆಗೆ ಕರೆಸಿ ಅಮಾನುಷವಾಗಿ ಹಲ್ಲೆ ನಡೆಸಿರುವ ಕಾರ್ಕಳ ನಗರ ಠಾಣೆ ಎಸ್.ಐ ಮಧು ವರ್ತನೆ ಖಂಡನೀಯ. ಅವರನ್ನು ಅಮಾನತುಗೊಳಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ಆಗ್ರಹಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ರಾಧಾಕೃಷ್ಣ ನಾಯಕ್ ಹೆಸರಲ್ಲಿ ಫೇಸ್ ಬುಕ್ನಲ್ಲಿ ನಕಲಿ ಖಾತೆ ಸೃಷ್ಟಿಸಿ ದೇಶದ ಸೈನಿಕರ ಬಗ್ಗೆ ಅವಹೇಳನಕಾರಿ ಬರಹ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಆ ಬಗ್ಗೆ ಅವರು ಸಂಬಂಧಪಟ್ಟ ಸೈಬರ್ ಕ್ರೈಮ್ ವಿಭಾಗಕ್ಕೆ ದೂರು ಸಲ್ಲಿಸಿದ್ದರು. ಆದರೆ, ಕಾರ್ಕಳ ನಗರ ಠಾಣಾಧಿಕಾರಿ ನಕಲಿ ಖಾತೆ ಸೃಷ್ಟಿಸಿದವರನ್ನು ಹುಡುಕಿ ಶಿಕ್ಷಿಸದೆ ದೂರುದಾರನನ್ನೇ ಠಾಣೆಗೆ ಕರೆಸಿ ಹಲ್ಲೆ ನಡೆಸಿರುವುದರ ಹಿಂದೆ ವ್ಯವಸ್ಥಿತ ಪಿತೂರಿ ಅಡಗಿದೆ ಎಂದು ಅಶೋಕ್ ಕುಮಾರ್ ಆರೋಪಿಸಿದ್ದಾರೆ