Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲೆಯ ಎಲ್ಲಾ ಭಾಗಗಳಿಗೂ ಸರ್ಕಾರಿ ಬಸ್: ಆಗ್ರಹ

ಜಿಲ್ಲೆಯ ಎಲ್ಲಾ ಭಾಗಗಳಿಗೂ ಸರ್ಕಾರಿ ಬಸ್: ಆಗ್ರಹ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
********************************

(ಸುದ್ದಿಕಿರಣ ವರದಿ)

ಉಡುಪಿ, ಜು. 5: ಜಿಲ್ಲೆಯ ಎಲ್ಲಾ ಭಾಗಗಳಿಗೂ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಕುರಿತು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಹಲವು ಕಾಲೇಜುಗಳಲ್ಲಿ ಲಸಿಕೆ ಅಭಿಯಾನ ಪ್ರಾರಂಭಗೊಂಡಿದೆ. ಆದರೆ, ಹಲವು ಗ್ರಾಮಾಂತರ ಹಾಗೂ ಒಳ ಭಾಗದಲ್ಲಿರುವ ವಿದ್ಯಾರ್ಥಿಗಳಿಗೆ ಬಸ್ಸುಗಳಿಲ್ಲದ ಕಾರಣ ಕಾಲೇಜಿಗೆ ತೆರಳಿ ಲಸಿಕೆ ಪಡೆಯಲು ಸಾಧ್ಯವಾಗುತ್ತಿಲ್ಲ.
ಜಿಲ್ಲೆಯ ಹಲವು ಭಾಗಗಳಿಗೆ ಸರ್ಕಾರಿ ಬಸ್ಸುಗಳ ಸೌಲಭ್ಯವೇ ಇಲ್ಲವಾದ್ದರಿಂದ, ಅದೇ ರೀತಿ ಕೇವಲ ನಿಗದಿತ ಸಮಯಕ್ಕೆ ಮಾತ್ರ ಖಾಸಗಿ ಬಸ್ಸುಗಳಿದ್ದು ಆ ಬಸ್ ತಪ್ಪಿದರೆ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇರುವ ಕಾರಣ ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.

ಈ ಎಲ್ಲಾ ಸಮಸ್ಯೆಗಳನ್ನು ಪರಿಗಣಿಸಿ ಜಿಲ್ಲೆಯ ಎಲ್ಲಾ ಭಾಗಗಳಿಗೂ ಸರ್ಕಾರಿ ಬಸ್ಸು ಸಂಚರಿಸುವಂತೆ ಹಾಗೂ ಲಾಕ್ ಡೌನ್ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಬಸ್ಸಿನ ಮೂಲಕ ಸಂಚರಿಸಿ ಲಸಿಕೆ ಪಡೆಯಲು ಅನುಕೂಲ ಮಾಡಿಕೊಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಅರ್ಫಾಝ್, ಉಡುಪಿ ಘಟಕ ಸದಸ್ಯರಾದ ತಾಬಿಶ್, ಸುಹೈಲ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!