ಉಡುಪಿ: ಜಿಲ್ಲೆಯೂ ಸೇರಿದಂತೆ ರಾಜ್ಯದಾದ್ಯಂತ ಇರುವ ಬಿಲ್ಲವ, ಈಡಿಗ, ನಾಮಧಾರಿ ಇನ್ನಿತರ ಉಪ ಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವಂತೆ ಧಾರ್ಮಿಕ ದತ್ತಿ ಇಲಾಖೆ ಸಚಿವ, ಬಿಲ್ಲವ ಮುಂದಾಳು ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಸೋಮವಾರ ಜಿಲ್ಲೆಗಾಗಮಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಈ ಕುರಿತು ಮನವಿ ನೀಡಲಾಯಿತು. ಅದಕ್ಕಾಗಿ 50 ಕೋ. ರೂ. ಹಣವನ್ನು ಈ ಬಾರಿಯ ಬಜೆಟ್ ನಲ್ಲಿ ಮೀಸಲಿಡುವಂತೆ ಮನವಿಯಲ್ಲಿ ವಿನಂತಿಸಲಾಯಿತು.
ಮನವಿಗೆ ತಕ್ಷಣ ಸ್ಪಂದಿಸಿದ ಸಿಎಂ ಬಿ.ಎಸ್.ವೈ. ಈ ಬಾರಿಯ ಬಜೆಟ್ ನಲ್ಲಿ ಹಣ ಮೀಸಲಿಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್ ಮತ್ತು ಲಾಲಾಜಿ ಆರ್. ಮೆಂಡನ್ ಹಾಗೂ ಬಿಲ್ಲವ ಸಮಾಜದ ಪ್ರಮುಖರಾದ ಬಿ. ಎನ್. ಶಂಕರ ಪೂಜಾರಿ, ಅಚ್ಯುತ ಕಲ್ಮಾಡಿ, ನವೀನ್ ಮೊದಲಾದವರಿದ್ದರು.