Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ವೈದ್ಯಕೀಯ ಕಾಲೇಜಿಗೆ ಭೇಟಿ

ವೈದ್ಯಕೀಯ ಕಾಲೇಜಿಗೆ ಭೇಟಿ

ಮಂಗಳೂರು: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಭೇಟಿ ನೀಡಿದರು.

ಶಾಸಕರನ್ನು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಪರವಾಗಿ ಮಂಗಳೂರು ಕ್ಯಾಂಪಸ್ ಸಹಕುಲಪತಿ ಡಾ. ದಿಲೀಪ್ ಜಿ. ನಾಯಕ್ ಸ್ವಾಗತಿಸಿದರು.

ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ, ಡೀನ್ ಡಾ. ಎಂ. ವೆಂಕಟ್ರಾಯ ಪ್ರಭು, ಕೆ.ಎಂ.ಸಿ. ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಆನಂದ್ ವೇಣುಗೋಪಾಲ್ ಜೊತೆ ಶಾಸಕ ಕಾಮತ್ ನಗರ ವೈದ್ಯಕೀಯ ಸಮಸ್ಯೆ ಬಗ್ಗೆ ಮಾತುಕತೆ ನಡೆಸಿದರು.

ದ.ಕ. ಜಿಲ್ಲಾ ಬಿಜೆಪಿ ನಾಯಕ ಸಂಜಯ ಪ್ರಭು, ಮಾಹೆ ಎಸ್ಟೇಟ್ ಆಫೀಸರ್ ಬಾಲಕೃಷ್ಣ ಪ್ರಭು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!