ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಅಂಗವಾಗಿ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ವಿಶ್ವ ಹಿಂದೂ ಪರಿಷತ್ (ವಿ.ಹಿಂ.ಪ.) ಕಾರ್ಯಕರ್ತರು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಪಾದರು, ಹಿಂದೂಗಳ ಶ್ರದ್ಧಾಕೇಂದ್ರವಾದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀರಾಮನ ಮಂದಿರಕ್ಕೆ ಪ್ರತಿಯೊಬ್ಬರೂ ತಮ್ಮ ಪಾಲಿನ ನಿಧಿಯನ್ನು ಸಮರ್ಪಿಸಬೇಕೆಂದು ಕರೆ ನೀಡಿದರು
ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘ ನಗರ ಸಂಘಚಾಲಕ ರಾಮಚಂದ್ರ ಸನಿಲ್, ವಿಭಾಗ ಸಹ ಪ್ರಚಾರ ಪ್ರಮುಖ್ ಸುರೇಶ್ ಹೆಜಮಾಡಿ, ಗಣಪತಿ ನಾಯಕ್, ಕಿಶೋರ್ ಮೊದಲಾದವರಿದ್ದರು