ಸುದ್ದಿಕಿರಣ ವರದಿ
ಸೋಮವಾರ, ಜುಲೈ 11
ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳು ಸೆರೆವಾಸ
ನವದೆಹಲಿ: 2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿ, ಇದೀಗ ಇಂಗ್ಲೆಂಡ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಮತ್ತು 2 ಸಾವಿರ ರೂ ದಂಡ ವಿಧಿಸಿದೆ.
ನ್ಯಾಯಾಲಯದ ಆದೇಶ ಉಲ್ಲಂಘಿಸಿ ತನ್ನ ಮಕ್ಕಳಿಗೆ 40 ಮಿಲಿಯನ್ (ಒಂದು ಮಿಲಿಯನ್= 10 ಲಕ್ಷ) ಹಣ ವರ್ಗಾವಣೆ ಮಾಡಿರುವ ಕುರಿತು ಮಲ್ಯ, ನ್ಯಾಯಾಂಗ ನಿಂದನೆ ಆರೋಪದಲ್ಲಿ ದೋಷಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ನಾಲ್ಕು ವಾರಗಳಲ್ಲಿ ಬಡ್ಡಿ ಸಮೇತ 40 ಮಿಲಿಯನ್ ಡಾಲರ್ ಠೇವಣಿ ಮಾಡುವಂತೆ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದ್ದು, ತಪ್ಪಿದಲ್ಲಿ ಆಸ್ತಿ ಜಪ್ತಿ ಮಾಡಿಕೊಳ್ಳಲಾಗುವುದು ಎಂದೂ ಕೋರ್ಟ್ ಎಚ್ಚರಿಕೆ ನೀಡಿದೆ.