ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 22
ಮುರ್ಮು ಗೆಲುವಿಗೆ ಸಂಭ್ರಮಾಚರಣೆ
ಮಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಿ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಗೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ನೇತೃತ್ವದಲ್ಲಿ ಶುಕ್ರವಾರ ವಿಜಯೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಪಕ್ಷ ಪ್ರಮುಖರಾದ ನಿತಿನ್ ಕುಮಾರ್, ರವಿಶಂಕರ್ ಮಿಜಾರು, ಸುಧೀರ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರೂಪ ಬಂಗೇರ, ಸುರೇಂದ್ರ, ನಾರಾಯಣ ಗಟ್ಟಿ, ಗುರುಚರಣ್ ಹಾಗೂ ಮನಪಾ ಸದಸ್ಯರು ಇದ್ದರು