ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************
(ಸುದ್ದಿಕಿರಣ ವರದಿ)
ಉಡುಪಿ, ಜು. 7: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೂತನ ಸಹಕಾರ ಸಚಿವಾಲಯ ರಚನೆ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ದೇಶದ ಸುಮಾರು 35 ಕೋಟಿ ನಾಗರಿಕರು ಸಹಕಾರಿ ಸಂಘಗಳ ಸದಸ್ಯರಾಗಿ ಸಹಕಾರಿ ಕ್ಷೇತ್ರದ ಮೂಲಕ ತಮ್ಮ ಆರ್ಥಿಕ ವ್ಯವಹಾರ ನಡೆಸುತ್ತಿದ್ದು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಸಹಕಾರಿ ಕ್ಷೇತ್ರಕ್ಕೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ಐತಿಹಾಸಿಕ ನಿರ್ಧಾರ ಅಭಿನಂದನೀಯ.
ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಕೇಂದ್ರ ಸರ್ಕಾರದ ಈ ನೂತನ ಸಹಕಾರ ಸಚಿವಾಲಯ, ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಆಡಳಿತ ಹಾಗೂ ಕಾನೂನು ಮತ್ತು ನೀತಿ ಚೌಕಟ್ಟು ಒದಗಿಸಿ ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯ ಸಾಕಾರಗೊಳಿಸುವಲ್ಲಿ ಸಹಕಾರಿಯಾಗಲಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹಕಾರಿ ಕ್ಷೇತ್ರದ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಯಶಪಾಲ್ ತಿಳಿಸಿದ್ದಾರೆ.