Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಜಿಲ್ಲೆಗೊಂದು ಗೋಶಾಲೆ ಸ್ಥಾಪನೆ ನಿರ್ಧಾರ ಸ್ವಾಗತಾರ್ಹ

ಜಿಲ್ಲೆಗೊಂದು ಗೋಶಾಲೆ ಸ್ಥಾಪನೆ ನಿರ್ಧಾರ ಸ್ವಾಗತಾರ್ಹ

ಉಡುಪಿ: ರಾಜ್ಯದಾದ್ಯಂತ ಪ್ರತೀ ಜಿಲ್ಲೆಯಲ್ಲಿ ಗೋಶಾಲೆ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿ ಮೊದಲ ಹಂತದಲ್ಲಿ 15 ಕೋ. ರೂ. ಅನುದಾನ ಒದಗಿಸಿದ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಹೇಳಿದ್ದಾರೆ.

ಗೋಸಂಪತ್ತಿನ ರಕ್ಷಣೆಗಾಗಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಅಧಿನಿಯಮ ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಇದೀಗ ಪ್ರತೀ ಜಿಲ್ಲೆಗೊಂದರಂತೆ ಗೋಶಾಲೆ ಸ್ಥಾಪಿಸುವ ಮೂಲಕ ಗೋ ರಕ್ಷಣೆ ಕೇವಲ ಮಾತಲ್ಲ, ಅದು ನಮ್ಮ ಸಂಕಲ್ಪ ಎಂಬ ಬದ್ಧತೆಯನ್ನು ನಿರೂಪಿಸಿದೆ.

ಗೋ ಶಾಲೆಗಳ ನಿರ್ಮಾಣಕ್ಕೆ ರಾಜ್ಯದಾದ್ಯಂತ ನಿವೇಶನ ಗುರುತಿಸಿರುವ ಪಶು ಸಂಗೋಪನ ಇಲಾಖೆ ಶೀಘ್ರವಾಗಿ ಗೋಶಾಲೆ ನಿರ್ಮಾಣಕ್ಕೆ ಮುಂದಾಗಲಿ ಹಾಗೂ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಬಿ. ಚೌಹಾಣ್ ಹಾಗೂ ಸಚಿವ ಸಂಪುಟದ ಸರ್ವ ಸದಸ್ಯರಿಗೆ ಯಶಪಾಲ್ ಅಭಿನಂದಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!