Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಪ್ರತೀ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆ ನಿರ್ಧಾರ ಸ್ವಾಗತಾರ್ಹ

ಪ್ರತೀ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪನೆ ನಿರ್ಧಾರ ಸ್ವಾಗತಾರ್ಹ

ಉಡುಪಿ: ರಾಜ್ಯದ ಪ್ರತೀ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯಲು ರಾಜ್ಯ ಸರ್ಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯ ಸ್ವಾಗತಾರ್ಹ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಅದಕ್ಕಾಗಿ ಮೊದಲ ಹಂತದಲ್ಲಿ 15 ಕೋ. ರೂ. ಅನುದಾನ ಮಂಜೂರು ಮಾಡಿರುವ ರಾಜ್ಯ ಸರ್ಕಾರದ ಕ್ರಮ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಅಧಿನಿಯಮಕ್ಕೆ ಪೂರಕ ಎನಿಸಲಿದೆ.

ಮನುಕುಲದ ನಿತ್ಯ ಜೀವನಕ್ಕೆ ವರದಾನವಾಗಿರುವ ಗೋವಿನ ಸಂತತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮ ಸ್ವಾಗತಾರ್ಹ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!