Thursday, December 2, 2021
Home ಸಮಾಚಾರ ಜಿಲ್ಲಾ ಸುದ್ದಿ ಆರ್.ಎಸ್.ಎಸ್.ಗೆ ಸಾಮಾಜಿಕ ನ್ಯಾಯದ ಕಲ್ಪನೆಯಲ್ಲಿ ನಂಬಿಕೆ ಇಲ್ಲ

ಆರ್.ಎಸ್.ಎಸ್.ಗೆ ಸಾಮಾಜಿಕ ನ್ಯಾಯದ ಕಲ್ಪನೆಯಲ್ಲಿ ನಂಬಿಕೆ ಇಲ್ಲ

ಆರ್.ಎಸ್.ಎಸ್.ಗೆ ಸಾಮಾಜಿಕ ನ್ಯಾಯದ ಕಲ್ಪನೆಯಲ್ಲಿ ನಂಬಿಕೆ ಇಲ್ಲ

ಉಡುಪಿ, ನ. 25 (ಸುದ್ದಿಕಿರಣ ವರದಿ): ಆರ್.ಎಸ್.ಎಸ್.ಗೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನಂಬಿಕೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಬೆಳವಣಿಗೆಯಲ್ಲಿ ಆರ್.ಎಸ್.ಎಸ್. ಕೊಡುಗೆ ಏನು ಎಂದು ಪ್ರಶ್ನಿಸಿದರು.

ನಾನು ಆರ್.ಎಸ್.ಎಸ್.ನ್ನು ತಾಲಿಬಾನ್ ಜೊತೆ ಹೋಲಿಸಿದ್ದೆ ನಿಜ. ಆದರೆ ಎಲ್ಲಾ ವಿಷಯಗಳಲ್ಲೂ ತಾಲಿಬಾನ್ ಎಂದು ಹೋಲಿಕೆ ಮಾಡಿರಲಿಲ್ಲ. ಕೆಲವೊಂದು ವಿಚಾರಗಳಲ್ಲಿ ತಾಲಿಬಾನ್ ಜೊತೆ ಹೋಲಿಕೆ ಮಾಡಿದ್ದೆ. ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ಬಳಿಕ ದೇಶದ ಆರ್ಥಿಕ ಬೆಳವಣಿಗೆಗೆ ಅವರ ಕೊಡುಗೆ ಏನು? ಆರ್.ಎಸ್.ಎಸ್.ನವರು ಮನುವಾದ, ಶ್ರೇಣೀಕೃತ ಸಮಾಜದ ಪ್ರತಿಪಾದಕರು. ಆದರೆ, ಕಾಂಗ್ರೆಸ್ ಜಾತ್ಯತೀತ ನಿಲುವಿಗೆ ಬದ್ಧವಾಗಿರುವ ಪಕ್ಷ. ಪರಿಷತ್ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ ಎಲ್ಲರಿಗೂ ನಾವು ಅವಕಾಶ ನೀಡಿದ್ದೇವೆ ಎಂದರು.

ಭಂಡಾರಿ ಆರ್.ಎಸ್.ಎಸ್. ಹಿನ್ನೆಲೆಯವರಲ್ಲ
ಮಂಜುನಾಥ ಭಂಡಾರಿ ಆರಂಭದಿಂದಲೂ ಎನ್.ಎಸ್.ಯು.ಐ ಕಾರ್ಯಕರ್ತರಾಗಿ ಕೆಲಸ ಮಾಡಿದ್ದು, ಯೂತ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಮಂಜುನಾಥ ಭಂಡಾರಿ ಆರ್.ಎಸ್.ಎಸ್. ಹಿನ್ನೆಲೆಯವರಲ್ಲ. ಇವೆಲ್ಲಾ ಕೇವಲ ಊಹಾಪೋಹ ಎಂದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ವದಂತಿ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನಲ್ಲಿ ನಡೆದ ಸದಸ್ಯತ್ವ ನೋಂದಣಿ ಸಭೆಯಲ್ಲಿ ಪ್ರಮೋದ್ ಭಾಗವಹಿಸಿದ್ದರು. ಅಲ್ಲದೆ ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಚಾರದ ನೇತೃತ್ವ ವಹಿಸಿ ಉಪಚುನಾವಣೆ ಕಾರ್ಯದಲ್ಲಿ 15 ದಿನ ಭಾಗವಹಿಸಿದ್ದರು. ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ. ಪ್ರಮೋದ್ ಜೊತೆ ಸಮಾಲೋಚನೆ ಮಾಡುತ್ತೇನೆ ಎಂದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪಕ್ಷ ಪ್ರಮುಖರಾದ ಎಂ. ಎ. ಗಫೂರ್, ಸುನೀಲ್ ಡಿ. ಬಂಗೇರ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!