Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಯಾವ ಖಾತೆ ನೀಡಿದರೂ ನಿಭಾಯಿಸುವೆ

ಯಾವ ಖಾತೆ ನೀಡಿದರೂ ನಿಭಾಯಿಸುವೆ

ಯಾವ ಖಾತೆ ನೀಡಿದರೂ ನಿಭಾಯಿಸುವೆ

(ಸುದ್ದಿಕಿರಣ ವರದಿ)

ಬೆಂಗಳೂರು: ಸಿಎಂ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸಲು ಸಂತೋಷವೆನಿಸುತ್ತದೆ. ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಗ್ರಾಮೀಣಾಭಿವೃದ್ಧಿ ಬಗ್ಗೆ ನನಗೆ ಆಸ್ತಿ ಇದೆ.
ಹೀಗೆಂದವರು ನಿಯೋಜಿತ ಸಚಿವ ಕೋಟ ಶ್ರೀನಿವಾಸ ಪೂಜಾರಿ.

ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಸ್ಥಾನ ಪಡೆದಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಡಿಯೂರಪ್ಪ ಜೊತೆಗೆ ರಾಜಕೀಯಕ್ಕೆ ಬಂದವನು. ಬೊಮ್ಮಾಯಿ ಅವರಿಗೆ ನಾನು ಏನು ಎನ್ನುವುದು ಗೊತ್ತಿದೆ. ನನ್ನ 45 ವರ್ಷಗಳ ರಾಜಕೀಯ ಸೇವೆ ಗುರುತಿಸಿ ಮಂತ್ರಿ ಸ್ಥಾನ ಕೊಟ್ಟಿದ್ದಾರೆ.

ನನಗೆ ಸೂಕ್ತ ಖಾತೆ ನೀಡುವ ಭರವಸದೆ ಇದೆ. ಇಂಥದೇ ಖಾತೆ ನೀಡುವಂತೆ ಕೇಳಲಾರೆ ಎಂದರು.

ನಳಿನ್ ಅಭಿನಂದನೆ
ರಾಜ್ಯ ಸರಕಾರದ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲು ಅಧಿಕೃತ ಆಹ್ವಾನ ಬರುತ್ತಲೇ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಆಗಮಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಕೃತಜ್ಞತೆ ಸಲ್ಲಿಸಿದರು.

ನಳಿನ್ ಕುಮಾರ್ ಕಟೀಲು ಅವರು ಕೋಟ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಂಗಳೂರು ಪ್ರಭಾರಿ ಉದಯಕುಮಾರ ಶೆಟ್ಟಿ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಸತೀಶ ಕುಂಪಲ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!