Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಕುಟುಂಬ ಯೋಜನಾ ಕ್ರಮಗಳಿಂದ ಜನಸಂಖ್ಯೆ ನಿಯಂತ್ರಣ

ಕುಟುಂಬ ಯೋಜನಾ ಕ್ರಮಗಳಿಂದ ಜನಸಂಖ್ಯೆ ನಿಯಂತ್ರಣ

ಸುದ್ದಿಕಿರಣ ವರದಿ
ಬುಧವಾರ, ಜುಲೈ 13

ಕುಟುಂಬ ಯೋಜನಾ ಕ್ರಮಗಳಿಂದ ಜನಸಂಖ್ಯೆ ನಿಯಂತ್ರಣ
ಉಡುಪಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ವಸತಿ ಸಮಸ್ಯೆಗಳುಂಟಾಗುತ್ತಿದ್ದು, ಆರೋಗ್ಯ ಇಲಾಖೆಯ ಕುಟುಂಬ ಯೋಜನಾ ಕ್ರಮಗಳನ್ನು ಬಳಸಿಕೊಂಡು ಸಾರ್ವಜನಿಕರು ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಹೇಳಿದರು.

ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ ರಾವ್ ಮಾತನಾಡಿ, ಭಾರತ ಅಭಿವೃದ್ಧಿಶೀಲ ರಾಷ್ಟ್ರವಾಗಿದ್ದು ಶಿಕ್ಷಣದ ಕೊರತೆ, ಅಜ್ಞಾನ, ಬಾಲ್ಯ ವಿವಾಹ, ಮೂಢನಂಬಿಕೆ ಮುಂತಾದ ಕಾರಣಗಳಿಂದ ಜನಸಂಖ್ಯೆ ಹೆಚ್ಚುತ್ತಿದೆ. ಸುರಕ್ಷಿತ ಗರ್ಭಪಾತ, ಅರ್ಹ ದಂಪತಿಗಳು ಕುಟುಂಬ ಕಲ್ಯಾಣ ವಿಧಾನ ಅನುಸರಿಸುವ ಮೂಲಕ ಜನಸಂಖ್ಯಾ ಸ್ಪೋಟ ನಿಯಂತ್ರಿಸಬಹುದು ಎಂದರು.

ಶಾಲಾ ಪ್ರಾಂಶುಪಾಲ ರುದ್ರೇಗೌಡ ಭಿತ್ತಿಪತ್ರ ಬಿಡುಗಡೆ ಮಾಡಿ, ಜನಸಂಖ್ಯಾ ದಿನಾಚರಣೆ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಸಾತ್ವಿಕ್, ಹಿರಿಯ ಉಪನ್ಯಾಸಕ ದಯಾನಂದ ಇದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಸ್ವಾಗತಿಸಿದರು. ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವಪಟ್ಟ ಪಟಗಾರ್ ನಿರೂಪಿಸಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!