ಸುದ್ದಿಕಿರಣ ವರದಿ
ಶನಿವಾರ, ಜುಲೈ 16
ಡಾ| ಹೆಗ್ಗಡೆಯವರಿಗೆ ಕಲಾರಂಗ ಅಭಿವಂದನೆ
ಉಡುಪಿ: ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಂದಾಗಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಯಕ್ಷಗಾನ ಕಲಾರಂಗದ ಪದಾಧಿಕಾರಿಗಳು ಧರ್ಮಸ್ಥಳಕ್ಕೆ ತೆರಳಿ, ಡಾ| ಹೆಗ್ಗಡೆಯವರನ್ನು ಅಭಿನಂದಿಸಿದರು.
ಕಲಾರಂಗ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪಾಧ್ಯಕ್ಷರಾದ ಎಸ್. ವಿ. ಭಟ್ ಮತ್ತು ಪಿ. ಕಿಶನ್ ಹೆಗ್ಡೆ, ಕಾರ್ಯದರ್ಶಿ ಮುರಳಿ ಕಡೆಕಾರ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಬಿ. ಭುವನಪ್ರಸಾದ್ ಹೆಗ್ಡೆ ಮತ್ತು ಪಿ. ಕೃಷ್ಣಮೂರ್ತಿ ಭಟ್ ಇದ್ದರು.