Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಕೇಂದ್ರ ಮೀನುಗಾರಿಕೆ ಸಚಿವರಿಗೆ ಅಭಿನಂದನೆ

ಕೇಂದ್ರ ಮೀನುಗಾರಿಕೆ ಸಚಿವರಿಗೆ ಅಭಿನಂದನೆ

ಉಡುಪಿ: ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಹಾಗೂ ಡೈರಿ ಇಲಾಖೆ ನೂತನ ರಾಜ್ಯ ಸಚಿವ ಎಲ್. ಮುರುಗನ್ ಅವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ ಸುವರ್ಣ ಮಂಗಳವಾರ ಭೇಟಿಯಾಗಿ ಅಭಿನಂದಿಸಿದರು. ಅವರಿಗೆ ಉಡುಪಿ ಶ್ರೀ ಕೃಷ್ಣ ಪ್ರಸಾದ ನೀಡಿದರು.

ಕರ್ನಾಟಕ ಕರಾವಳಿ ಹಾಗೂ ರಾಜ್ಯದ ಮೀನುಗಾರರ ಸಮಸ್ಯೆ ಬಗ್ಗೆ ಹಾಗೂ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಮತ್ಸ್ಯ ಸಂಪದ ಮತ್ತು ಸಾಗರಮಾಲಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಮೀನುಗಾರಿಕೆ ಅಭಿವೃದ್ಧಿ ಬಗ್ಗೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.

ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರದಲ್ಲಿಯೇ ಕರ್ನಾಟಕದ ಕರಾವಳಿ ಜಿಲ್ಲೆಗೆ ಭೇಟಿ ನೀಡಿ, ಮೀನುಗಾರರ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!