Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಆಗಸ್ಟ್ 12-13: ಯೋಗಾಥನ್- 10 ಸಾವಿರ ಮಂದಿಯಿಂದ ಯೋಗಾಭ್ಯಾಸ

ಆಗಸ್ಟ್ 12-13: ಯೋಗಾಥನ್- 10 ಸಾವಿರ ಮಂದಿಯಿಂದ ಯೋಗಾಭ್ಯಾಸ

ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 1

ಆಗಸ್ಟ್  12-13: ಯೋಗಾಥನ್- 10 ಸಾವಿರ ಮಂದಿಯಿಂದ ಯೋಗಾಭ್ಯಾಸ
ಉಡುಪಿ: ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದೂ ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಪೂರಕವಾಗಿ ಆಗಸ್ಟ್ 12, 13 ಮತ್ತು 14ರಂದು ಯೋಗಾಥಾನ್ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಜಿಲ್ಲೆಯಲ್ಲಿ ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್ ನಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

10 ಸಾವಿರ ಮಂದಿಯಿಂದ ಯೋಗಾಭ್ಯಾಸ
ಕಾರ್ಯಕ್ರಮದಲ್ಲಿ ಏಕಕಾಲದಲ್ಲಿ 10 ಸಾವಿರ ಮಂದಿಗೆ ಒಂದೆಡೆ ತರಬೇತಿ ನೀಡಿ, ಯೋಗವನ್ನು ತಮ್ಮ ದೈನಂದಿನ ಚಟುವಟಿಕೆಯನ್ನಾಗಿಸಿಕೊಳ್ಳುವ ಜೊತೆಗೆ ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವಂತರನ್ನಾಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶ. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು.

ಯೋಗಾಭ್ಯಾಸಕ್ಕೆ ಸಾರ್ವಜನಿಕರು ಸೇರಲು ಅನುಕೂಲವಾಗುವ ಸೂಕ್ತ ಸ್ಥಳ ಗುರುತಿಸಿ, ಅಲ್ಲಿ ಅಗತ್ಯ ಮೂಲ ಸೌಕರ್ಯ ಕೈಗೊಳ್ಳಬೇಕು. ಜಿಲ್ಲೆಯ ಯೋಗ ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ವಿವಿಧ ಸ್ವಯಂಸೇವಾ ಸಂಘಟನೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆಯುವಂತೆ ಸೂಚಿಸಿದರು.

ಜಿಲ್ಲೆಯ ಎಲ್ಲಾ ಸಾರ್ವಜನಿಕರು ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿ ಮಾಡಲು, ಆನ್ ಲೈನ್ ನೋಂದಣಿಯನ್ನು [email protected] <mailto:[email protected] ಆಫ್ ಲೈನ್ ನೋಂದಣಿಯನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮಾಡಬಹುದು ಎಂದರು.

ಯುವಜನರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾಲೇಜುಗಳಲ್ಲಿ ಪ್ರಾಂಶುಪಾಲರ ಸಹಕಾರ ಪಡೆಯಬೇಕು. ಯೋಗ ತರಬೇತಿ ನೀಡಲು ಯೋಗ ಶಿಕ್ಷಕರನ್ನು ಗುರುತಿಸಬೇಕು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಉಡುಪಿ ಜಿಲ್ಲೆ ಘೋಷಣೆಯಾಗಿ 25 ವರ್ಷ ಪೂರ್ಣಗೊಳ್ಳುತ್ತಿದ್ದು, ಅದರ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸತೀಶ್ ಆಚಾರ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!