ಉಡುಪಿ: ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯುವಜನತೆಗೆ ಶೇ 50ರಷ್ಟು ಅವಕಾಶ ನೀಡುವಂತೆ ವಿನಂತಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕ ಯೋಗೀಶ್ ಆಚಾರ್ಯ ಇನ್ನ, ಸಹ ಸಂಯೋಜಕ ಪ್ರದೀಪ್ ಶೆಟ್ಟಿ ನಲ್ಲೂರು, ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನ, ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ನವೀನ್ ಪ್ರಸಿದ್ಧಿ, ಪ್ರಶಾಂತ್ ಹೆಗ್ಡೆ, ಶ್ಯಾಮ್, ಆಕಾಶ್ ಪೂಜಾರಿ, ಪ್ರಭಾಕರ ಆಚಾರ್ಯ ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ ನವೀನಚಂದ್ರ ಜ.ೆ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ನಾಯಕರಾದ ಪ್ರಶಾಂತ ಜತ್ತನ್ನ, ಅಣ್ಣಯ್ಯ ಶೇರಿಗಾರ್, ಹರೀಶ್ ಶೆಟ್ಟಿ, ಜ್ಯೋತಿ ಹೆಬ್ಬಾರ್ ಮೊದಲಾದವರಿದ್ದರು
ಯುವಜನತೆಗೆ ಅವಕಾಶ ನೀಡಲು ಮನವಿ
ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...