Monday, August 15, 2022
Home Uncategorized ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾಲು ಮಹತ್ತರ

ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾಲು ಮಹತ್ತರ

ಸುದ್ದಿಕಿರಣ ವರದಿ
ಶನಿವಾರ, ಆಗಸ್ಟ್ 6

ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾಲು ಮಹತ್ತರ
ಕಟಪಾಡಿ: ದೇಶದ 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಪು ಉತ್ತರ ಹಾಗೂ ದಕ್ಷಿಣ ವಲಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಕಟಪಾಡಿ ಮಟ್ಟುನಿಂದ ಶಿರ್ವ ವರೆಗೆ 15 ಕಿ.ಮಿ. ಪಾದಯಾತ್ರೆ ಶುಕ್ರವಾರ ನಡೆಸಲಾಯಿತು.

ಮಟ್ಟುನಲ್ಲಿ ಪಾದಯಾತ್ರೆಗೆ ಎಐಸಿಸಿ ಕಾರ್ಯದರ್ಶಿ ಜಯಕುಮಾರ್ ಮಯೂರ್ ಚಾಲನೆ ನೀಡಿದರು. ಕಾಂಗ್ರೆಸ್ ನಾಯಕರು ಈ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಸಾಕಷ್ಟು ಹೋರಾಟ, ತ್ಯಾಗ, ಬಲಿದಾನ ಮಾಡಿದ್ದಾರೆ.

ಆದರೆ ಬಿಜೆಪಿ, ಆರ್.ಎಸ್.ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಗಳಾಗದೇ ದೂರ ಉಳಿದಿತ್ತು. ಅವರು ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ಧವಾಗಿದ್ದರು ಮತ್ತು ಬ್ರಿಟಿಷರ ಸೇವೆ ಮಾಡುತ್ತಿದ್ದರು ಎಂದು ಟೀಕಿಸಿದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ನಾವು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಿಸುವುದು ಅತೀ ಅಗತ್ಯವಾಗಿದೆ. ಆ ಮೂಲಕ ದೇಶದ ಐಕ್ಯತೆ, ಸಮಗ್ರತೆ, ಜಾತ್ಯತೀತತೆ ಹಾಗೂ ಸಂವಿಧಾನ ರಕ್ಷಿಸುವ ಕಾರ್ಯವನ್ನು ಕಾಂಗ್ರೆಸ್ ಮಾಡಬೇಕಾಗಿದೆ. ಬಿಜೆಪಿ ಸರಕಾರ ಇಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ನಮ್ಮ ನಾಯಕರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಮಾತನಾಡಿ, ಪಾದಯಾತ್ರೆ ಮೂಲಕ ಕೋಮುವಾದಿ ಶಕ್ತಿಗಳಿಗೆ ತಡೆಯೊಡ್ಡಿ ಜಾತ್ಯತೀತ ಶಕ್ತಿಗಳಿಗೆ ಗೆಲುವು ಮೂಡಿಸುವ ಕೆಲಸವನ್ನು ಎಲ್ಲರೂ ಒಗ್ಗೂಡಿ ಮಾಡಬೇಕು. ಅಲ್ಲದೆ, ಪಕ್ಷದ ಕೊಡುಗೆಯನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕಾಗಿದೆ.

1885ರಲ್ಲಿ ಉದಯವಾದ ಕಾಂಗ್ರೆಸ್ ಪಕ್ಷ 62 ವರ್ಷ ಕಾಲ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದೆ. ಅಲ್ಲದೆ, ಇಂದಿನ ಈ ಬಲಿಷ್ಠ ಭಾರತ ಆಗಲು ಸ್ವಾತಂತ್ರ್ಯ ದೊರೆತ 75 ವರ್ಷಗಳಲ್ಲಿ 68 ವರ್ಷ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾ ನಂತರದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಜನರಿಗೆ ಪಾದಯಾತ್ರೆ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಕೆ. ಅಭಯಚಂದ್ರ ಜೈನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ, ಮುಖಂಡರಾದ ನವೀನಚಂದ್ರ ಶೆಟ್ಟಿ, ನವೀನಚಂದ್ರ ಸುವರ್ಣ, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಶಬ್ಬಿರ್ ಉಡುಪಿ, ಸರಸು ಡಿ. ಬಂಗೇರ, ಶ್ರೀನಿವಾಸ್, ಯತೀಶ್ ಕರ್ಕೇರ, ಉದ್ಯಾವರ ನಾಗೇಶ್ ಕುಮಾರ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!