ಶಿರ್ವ ಕಾಲೇಜು: ಸದ್ಭಾವನಾ ದಿನಾಚರಣೆ
(ಸುದ್ದಿಕಿರಣ ವರದಿ)
ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಮತ್ತು ಪ್ರತಿಜ್ಞಾ ಸ್ವೀಕಾರ ಸರಕಾರದ ಆದೇಶದಂತೆ ಸರಳವಾಗಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ಪ್ರತಿಜ್ಞಾ ವಿಧಿ ಬೋಧಿಸಿ ರಾಜ್ಯದ ಎಲ್ಲಾ ಧರ್ಮ ಮತ್ತು ಭಾಷೆಗಳ ಜನರಲ್ಲಿ ರಾಷ್ಟ್ರೀಯ ಏಕೀಕರಣ, ಕೋಮು ಸೌಹಾರ್ದತೆ ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆ ಮೂಡಿಸಿ ಹಿಂಸಾಚಾರ ತ್ಯಜಿಸುವಂತೆ ಮಾಡಲು ಪ್ರತಿವರ್ಷ ಆ. 20ರಂದು ಸದ್ಭಾವನಾ ದಿನ ಆಚರಿಸಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾಥರ್ಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಯಶೋದ, ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ಕುಮಾರ್, ಎನ್.ಎಸ್.ಎಸ್ ಯೋಜನಾಧಿಕಾರಿ ಪ್ರೇಮನಾಥ್, ರಕ್ಷಾ, ರೋವರ್ಸ್ ಮತ್ತು ರೇಂಜರ್ಸ್ ಸ್ಕೌಟ್ ಲೀಡರ್ ಗಳಾದ ಪ್ರಕಾಶ್ ಮತ್ತು ಸಂಗೀತ ಪೂಜಾರಿ, ಕಾಲೇಜಿನ ವಿದ್ಯಾರ್ಥಿಗಳು, ಎಲ್ಲಾ ಬೋಧಕ ಹಾಗೂ ಬೋಧಕೇತರ ವೃಂದದವರು ಇದ್ದರು.