Saturday, August 13, 2022
Home Uncategorized ವಿಕಿ ಇ-ಲರ್ನಿಂಗ್ ಸರ್ಟಿಫಿಕೇಟ್ ಕೋರ್ಸ್ ಆರಂಭ

ವಿಕಿ ಇ-ಲರ್ನಿಂಗ್ ಸರ್ಟಿಫಿಕೇಟ್ ಕೋರ್ಸ್ ಆರಂಭ

ಸುದ್ದಿಕಿರಣ ವರದಿ
ಮಂಗಳವಾರ, ಜೂನ್ 7

ವಿಕಿ ಇ-ಲರ್ನಿಂಗ್ ಸರ್ಟಿಫಿಕೇಟ್ ಕೋರ್ಸ್ ಆರಂಭ
ಉಡುಪಿ: ಅಜ್ಜರಕಾಡು ಡಾ| ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಆಶ್ರಯದಲ್ಲಿ ಕರಾವಳಿ ವಿಕಿಮೀಡಿಯನ್ಸ್ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಲಾಗಿರುವ ವಿಕಿ ಇ-ಲರ್ನಿಂಗ್ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ ಈಚೆಗೆ ಕಾಲೇಜಿನಲ್ಲಿ ನಡೆಯಿತು.

ಕರಾವಳಿ ವಿಕಿಮೀಡಿಯನ್ಸ್ ಸಂಸ್ಥೆ ಖಜಾಂಚಿ ಹಾಗೂ ಪೆರ್ಲ ನಳಂದಾ ಕಲೆ ಮತ್ತು ವಿಜ್ಞಾನ ಕಾಲೇಜು ಪ್ರಾಚಾರ್ಯ ಡಾ| ಕಿಶೋರ್ ಕುಮಾರ್ ರೈ ಹೂವಿನ ಗಿಡಕ್ಕೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದರು.

ಕನ್ನಡ ವಿಕಿಪೀಡಿಯಾದ ಬೆಳವಣಿಗೆಯಲ್ಲಿ ಕರಾವಳಿ ವಿಕಿಮೀಡಿಯನ್ಸ್ ಸಂಸ್ಥೆ ಕೊಡುಗೆ ಮತ್ತು ಕೋರ್ಸಿನ ಉಪಯುಕ್ತತೆ ಬಗ್ಗೆ ತಿಳಿಸಿದರು.

ಕೋರ್ಸಿನ ರೂವಾರಿ, ಕರಾವಳಿ ವಿಕಿಮೀಡಿಯನ್ಸ್ ಸಂಸ್ಥೆ ಕಾರ್ಯದರ್ಶಿ ಡಾ| ಯು. ಬಿ. ಪವನಜ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾಲೇಜಿನ ಪ್ರಾಚಾರ್ಯ ಡಾ| ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು.

ಕೋರ್ಸ್ ಸಂಯೋಜಕ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥ ರಾಮಚಂದ್ರ ಅಡಿಗ ಜಿ. ಸ್ವಾಗತಿಸಿ, ನಿರೂಪಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶ ಸಂಚಾಲಕ ಸೋಜನ್ ಕೆ. ಜಾರ್ಜ್ ವಂದಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!