ಉಡುಪಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ನೇತೃತ್ವದಲ್ಲಿ ಮಣಿಪಾಲ ಈಶ್ವರ ನಗರದ ಹೊಸಬೆಳಕು ಆಶ್ರಮದಲ್ಲಿ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಆಶ್ರಮದಲ್ಲಿರುವ ಮಹಿಳೆಯರೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಆಶ್ರಮದ ಮಹಿಳೆಯರೊಂದಿಗೆ ಕೇಕ್ ಕತ್ತರಿಸಿ, ಮಹಿಳೆಯರಿಗೆ ಅಗತ್ಯವಿರುವ ಉಡುಪು ಮತ್ತು ಸ್ಯಾನಿಟರಿ ಪ್ಯಾಡ್ ವಿತರಿಸಲಾಯಿತು. ಆಶ್ರಮವಾಸಿ ವೃದ್ಧೆಯರಿಗೆ ಉಪಾಹಾರದ ವ್ಯವಸ್ಥೆ ಮಾಡಲಾಯಿತು.
ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಮತ್ತು ಪ್ರಮೀಳಾ ಹರೀಶ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರಮಾ ವೈ. ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿಗಳಾದ ಪೂರ್ಣಿಮಾ ಶೆಟ್ಟಿ ಮತ್ತು ನೀರಜಾ, ಕೋಶಾಧಿಕಾರಿ ಮಾಯಾ ಕಾಮತ್, ಅಶ್ವಿನಿ ಶೆಟ್ಟಿ, ಸರೋಜ ದೇವಾಡಿಗ, ರಶ್ಮಿ ಶೆಣೈ, ಸುಧಾ ಪೈ ಮೊದಲಾದವರಿದ್ದರು