ಉಡುಪಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಜಿಲ್ಲಾ ಬಿಜೆಪಿಯ ಜಿಲ್ಲಾ ಕೋವಿಡ್ ಸಹಾಯವಾಣಿಗೆ ನೀಡಿದ ಅಂಬ್ಯುಲೆನ್ಸ್ ನ್ನು ಜಿಲ್ಲಾಸ್ಪತ್ರೆಗೆ ಕೋವಿಡ್ ಸಂಬಂಧಿ ತುರ್ತು ಉಪಯೋಗಕ್ಕಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಶನಿವಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಸ್ತಾಂತರಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ ಆತ್ರಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ್, ವಿನೋದ್ ನಾಯಕ್, ಅಂಬ್ಯುಲೆನ್ಸ್ ಚಾಲಕ ನಿಶಾಂತ್ ಗೌಡ (63615 07676) ಮುಂತಾದವರಿದ್ದರು.