ಉಡುಪಿ: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಉದ್ಯಾವರ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸಾರ್ವಜನಿಕರ ನೆರವಿಗಾಗಿ ಎಸ್.ಡಿ.ಎಂ ಆಯುಷ್ ಸಹಾಯವಾಣಿ ಆರಂಭಿಸಿದೆ.
ಸಾರ್ವಜನಿಕರು ಕೋವಿಡ್ ಬಗ್ಗೆ ತಮ್ಮ ಸಂದೇಹಗಳ ಸಂಬಂಧ ಸಹಾಯವಾಣಿ ದೂರವಾಣಿ ಸಂಖ್ಯೆ 7411918250ಗೆ ಬೆಳಗ್ಗೆ 9ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಹಾಗೂ ಅಪರಾಹ್ನ 2ರಿಂದ ಸಂಜೆ 5ರ ವರೆಗೆ ಕರೆ ಮಾಡಬಹುದು.
ಶಾರೀರಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಸಂಸ್ಥೆಯ ತಜ್ಞ ವೈದ್ಯರು ಸಲಹೆ ಮತ್ತು ಪರಿಹಾರ ಸೂಚಿಸಲಿದ್ದಾರೆ.
ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆ ಪ್ರಕಟಣೆ ತಿಳಿಸಿದೆ