Thursday, December 2, 2021
Home ಸಮಾಚಾರ ಜಿಲ್ಲಾ ಸುದ್ದಿ ತಕ್ಷಣ ಫಲಿತಾಂಶ ಪ್ರಕಟಿಸಲು ಮನವಿ

ತಕ್ಷಣ ಫಲಿತಾಂಶ ಪ್ರಕಟಿಸಲು ಮನವಿ

ತಕ್ಷಣ ಫಲಿತಾಂಶ ಪ್ರಕಟಿಸಲು ಮನವಿ

ಮಂಗಳೂರು, ನ. 24 (ಸುದ್ದಿಕಿರಣ ವರದಿ): ಪರೀಕ್ಷೆ ಮುಗಿದ ತಕ್ಷಣ ಫಲಿತಾಂಶ ಪ್ರಕಟಿಸುವಂತೆ ಆಗ್ರಹಿಸಿ ಎಬಿವಿಪಿ ಸದಸ್ಯರು ಸಂಬಂಧಿತರಿಗೆ ಬುಧವಾರ ಮನವಿ ಸಲ್ಲಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಹಲವಾರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಘನತೆ ಹೊಂದಿರುವ ವಿಶ್ವವಿದ್ಯಾನಿಲಯವಾಗಿದೆ. ಆದರೆ, ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಮುಗಿದು ತಿಂಗಳುಗಳೇ ಕಳೆದಿದ್ದರೂ ವಿಶ್ವವಿದ್ಯಾನಿಲಯ ಫಲಿತಾಂಶ ಪ್ರಕಟಿಸುವಲ್ಲಿ ವಿಳಂಬ ಮಾಡುತ್ತಿದೆ.

ಉನ್ನತ ಶಿಕ್ಷಣಕ್ಕಾಗಿ ತೆರಳುವ ವಿದ್ಯಾರ್ಥಿಗಳು ಫಲಿತಾಂಶ ವಿಳಂಬದಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ ವಿಶ್ವವಿದ್ಯಾನಿಲದ ಆಡಳಿತ ಮಂಡಳಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೀಘ್ರ ಫಲಿತಾಂಶ ಪ್ರಕಟಿಸುವಂತೆ ಆಗ್ರಹಿಸಿದರು.

ತಪ್ಪಿದಲ್ಲಿ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ್ ನಿಶನ್ ಅಲ್ವಾ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ, ಸಂಪತ್ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!