Wednesday, July 6, 2022
Home ಲೋಕಾಭಿರಾಮ ಆರೋಗ್ಯ ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

ಸುದ್ದಿಕಿರಣ ವರದಿ
ಸೋಮವಾರ, ಏಪ್ರಿಲ್ 25

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
ಬೆಂಗಳೂರು: ಕೊರೊನಾ ನಾಲ್ಕನೇ ಅಲೆ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸೋಮವಾರ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದರು.

ಲಸಿಕೆ ಅಭಿಯಾನಕ್ಕೆ ಒತ್ತುನೀಡಲಾಗುವುದು. ಅಲ್ಲದೆ, ಸೋಂಕು ಹೆಚ್ಚು ಇರುವ ದೇಶದಿಂದ ಆಗಮಿಸುವವರ ಮೇಲೆ ನಿಗಾ ಇಡಲಾಗುವುದು. ಕೊರೊನಾ ಸೋಂಕಿನ ಬಗ್ಗೆ ಶೀಘ್ರ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.

ಸದ್ಯ ಬೆಂಗಳೂರಿನಲ್ಲಿ ಪಾಸಿಟಿವ್ ದರ ಹೆಚ್ಚಳವಾಗಿದ್ದು, ಎಲ್ಲ ರೀತಿಯಲ್ಲಿ ಈ ಬಗ್ಗೆ ಗಮನಹರಿಸಲಾಗುತ್ತಿದೆ. ಮಾಸ್ಕ್ ಹಾಕದೇ ಇರುವವರಿಗೆ ಸದ್ಯ ದಂಡ ಹಾಕುವುದಿಲ್ಲ. ಮುಂಬರುವ ದಿನಗಳಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗುವುದು. ವ್ಯಕ್ತಿಗತ ಅಂತರ ಕಾಪಾಡಬೇಕು. ಏರ್ ಪೋರ್ಟ್ ನಲ್ಲಿ ಎಚ್ಚರ ವಹಿಸಿ, ನಾಲ್ವನೇ ಅಲೆ ಬರುವ ವರೆಗೆ ಕಾಯಬೇಡಿ, ಲಸಿಕೆ ಹಾಕಿಸಿಕೊಳಿ.್ಳ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಿ. ಮಾಸ್ಕ್ ಬಗ್ಗೆ ಇನ್ನುಳಿದ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಅಭಿವೃದ್ಧಿ ಆಯುಕ್ತ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಡಾ. ಎಂ.ಕೆ. ಸುದರ್ಶನ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ. ಅರುಂಧತಿ ಚಂದ್ರಶೇಖರ್, ಆರೋಗ್ಯ ಇಲಾಖೆ ಆಯುಕ್ತ ಡಿ. ರಣದೀಪ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕಚಂದ್ರ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!