Monday, July 4, 2022
Home ಲೋಕಾಭಿರಾಮ ಶಾಲೆಗೆ ಪುಸ್ತಕ ಹಸ್ತಾಂತರ

ಶಾಲೆಗೆ ಪುಸ್ತಕ ಹಸ್ತಾಂತರ

ಉಡುಪಿ: ಇಲ್ಲಿನ ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ತೆರೆದ ಮನೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ತಮ್ಮ ಶಾಲೆಯ ಗ್ರಂಥಾಲಯಕ್ಕೆ ಕಲಿಕೆಗೆ ಪೂರಕವಾಗುವ ಪುಸ್ತಕಗಳನ್ನು ಒದಗಿಸುವಂತೆ ಮನವಿ ಮಾಡಿದ್ದರು.

ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿದ ಚೈಲ್ಡ್ ಲೈನ್ 1098 ಉಡುಪಿ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಹಾಗೂ ಸದಸ್ಯರಾದ ವೃಷಕ್ ಮತ್ತು ಪ್ರಮೋದ್ ಅವರು ಶಾಲೆಗೆ ಭೇಟಿ ನೀಡಿ, ಜಿಲ್ಲಾ ಕೇಂದ್ರ ಗ್ರಂಥಾಲಯ ನೀಡಿದ 500 ಪುಸ್ತಕಗಳನ್ನು ಶಾಲೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶಕುಂತಲಾದೇವಿ ಹಾಗೂ ಇತರ ಶಿಕ್ಷಕರು ಮತ್ತು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!