ಸುದ್ದಿಕಿರಣ ವರದಿ
ಮಂಗಳವಾರ, ಏಪ್ರಿಲ್ 26
ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ
ಉಡುಪಿ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ 2021ನೇ ಸಾಲಿನ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಪಿ. ಜಿ. ಪನ್ನಗ ರಾವ್ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಅದೇ ರೀತಿ ಕರ್ನಾಟಕ ಸರಕಾರ ನೀಡುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ 2021- 22ನೇ ಸಾಲಿನ ಶಿಷ್ಯವೇತನಕ್ಕೆ ಆಯ್ಕೆಯಾಗಿದ್ದಾರೆ.
ಉಡುಪಿ ಸೃಷ್ಟಿ ನೃತ್ಯ ಕಲಾ ಕುಟೀರದ ಡಾ. ಮಂಜರಿ ಚಂದ್ರ ಪುಷ್ಪರಾಜ್ ಶಿಷ್ಯೆಯಾಗಿರುವ ಅವರು ಉಡುಪಿ ಗಣೇಶ ರಾವ್ ಮತ್ತು ಸುಮನ ಜಿ. ರಾವ್ ದಂಪತಿ ಪುತ್ರಿ.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡುತ್ತಿದ್ದಾರೆ