Thursday, July 7, 2022
Home ಲೋಕಾಭಿರಾಮ 27 ಲಕ್ಷ ರೂ. ಮೌಲ್ಯದ ಆ್ಯಂಬುಲೆನ್ಸ್ ಹಸ್ತಾಂತರ

27 ಲಕ್ಷ ರೂ. ಮೌಲ್ಯದ ಆ್ಯಂಬುಲೆನ್ಸ್ ಹಸ್ತಾಂತರ

ಉಡುಪಿ: ಜಿಲ್ಲಾಡಳಿತಕ್ಕೆ ಸುಮಾರು 27 ಲಕ್ಷ ರೂ. ಮೌಲ್ಯದ 2 ಆ್ಯಂಬುಲೆನ್ಸ್ ಗಳನ್ನು ಆ್ಯನ್ ಶೋರ್ ಕನ್ ಸ್ಟ್ರಕ್ಷನ್ ಕಂಪೆನಿ ಪ್ರೈ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಾಣಿಯೂರು ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಪಾದರು, ಕೋವಿಡ್ ನ ಈ ಸಂಕಷ್ಟ ಆದಷ್ಟು ಬೇಗ ಮುಕ್ತಾಯವಾಗಿ ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಲಿ ಎಂದು ಹಾರೈಸಿದರು.

ಜಿಲ್ಲಾಧಿಕಾರಿ ಜಿ. ಜಗದೀಶ್ ಮಾತನಾಡಿ, ಆ್ಯನ್ ಶೋರ್ ಕಂಪೆನಿ ವತಿಯಿಂದ ನೀಡಲಾದ ಈ ಎರಡು ಆ್ಯಂಬುಲೆನ್ಸ್ ಗಳನ್ನು ಉಡುಪಿ ಹಾಗೂ ಕಾಪು ತಾಲೂಕು ಆರೋಗ್ಯ ಕೇಂದ್ರಗಳಿಗೆ ನೀಡಲಾಗುವುದು ಎಂದರು. ಕಂಪೆನಿಯ ಮುಖ್ಯಸ್ಥರಿಗೆ ಜಿಲ್ಲಾಡಳಿತ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ರಘುಪತಿ ಭಟ್ ಮತ್ತು ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್.ಓ ಡಾ.ನಾಗಭೂಷಣ ಉಡುಪ, ಆ್ಯನ್ ಶೋರ್ ಕನ್ಸ್ ಸ್ಟ್ರಕ್ಷನ್ ಕಂಪನಿಯ ಹರೀಶ್ ಶೆಟ್ಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!