Thursday, July 7, 2022
Home ಲೋಕಾಭಿರಾಮ ಆರಂಬ ಅಂಬಲಪಾಡಿ ಭಾಗದಲ್ಲಿ ಹಡಿಲು ಭೂಮಿ ಕೃಷಿ ಚಟುವಟಿಕೆ

ಅಂಬಲಪಾಡಿ ಭಾಗದಲ್ಲಿ ಹಡಿಲು ಭೂಮಿ ಕೃಷಿ ಚಟುವಟಿಕೆ

ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನದಡಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಕೃಷಿ ಭೂಮಿ ಕೃಷಿ ಚಟುವಟಿಕೆಗಳನ್ನು ಶಾಸಕ ಕೆ. ರಘುಪತಿ ಭಟ್ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಕೃಷಿಭೂಮಿ ಸುತ್ತಮುತ್ತಲಿನ ತೋಡುಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಈ ಭಾಗದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ 20 ಎಕರೆ ಹಡಿಲು ಭೂಮಿ ಹಾಗೂ 5 ಎಕರೆ ಸ್ಥಳೀಯ ಕೃಷಿಕರಿಂದ ಸಾವಯುವ ಕೃಷಿ ಮಾಡಲಾಗುತ್ತಿದೆ. ಊರಿನ ಹಿರಿಯರು, ಭೂ ಮಾಲಕರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ದಿನಕರ ಬಾಬು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್ ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ. ಕೆ, ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಅಂಬಲಪಾಡಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಜಿಲ್ಲಾ ಬಿಜೆಪಿ ಸಹವಕ್ತಾರ ಶಿವಕುಮಾರ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಭಾರತಿ ಮತ್ತು ಕುಸುಮ, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಶೆಟ್ಟಿ ಹಾಗೂ ಕೃಷಿಕರು, ಪ್ರಮುಖರು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!