Monday, July 4, 2022
Home ಲೋಕಾಭಿರಾಮ ಆರಂಬ ಕೃಷಿಗೂ ಜೀವನಕ್ಕೂ ಅವಿನಾಭಾವ ಸಂಬಂಧ

ಕೃಷಿಗೂ ಜೀವನಕ್ಕೂ ಅವಿನಾಭಾವ ಸಂಬಂಧ

ಉಡುಪಿ: ಭಾರತ ಕೃಷಿ ಪ್ರಧಾನ ದೇಶ. ಹಳ್ಳಿಗಳಿಂದ ಕೂಡಿದ ನಮ್ಮ ದೇಶದಲ್ಲಿ ರೈತನೇ ದೇಶದ ಬೆನ್ನೆಲುಬು. ಕೃಷಿಗೂ ಜೀವನಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಉಡುಪಿ ಬಿಷಪ್ ವಂ. ಡಾ| ಜೆರಾಲ್ಡ್ ಐಸಾಕ್ ಲೋಬೋ ಹೇಳಿದರು.

ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಶುಕ್ರವಾರ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 50 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಕಲ್ಯಾಣಪುರ ಗ್ರಾ. ಪಂ. ವ್ಯಾಪ್ತಿಯ ಕಾವೇರಿಜಿಡ್ಡ ಸಾಧು ಪೂಜಾರಿ ಮನೆ ಬಳಿ 20 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಭತ್ತದ ಕಣಜ ಎಂದು ಕರೆದರೆ, ಕೃಷಿಯಲ್ಲಿ ಎರಡನೇ ಸ್ಥಾನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಿತ್ತು ಎಂದರು.

ಹಡಿಲು ಭೂಮಿಯನ್ನು ಹದಗೊಳಿಸಿ ವ್ಯವಸಾಯಕ್ಕೆ ಅಣಿ ಮಾಡಿರುವುದು ಶ್ಲಾಘನೀಯ. ಅದರಿಂದ ನಾವು ಉಣ್ಣುವ ಅನ್ನವನ್ನು ನಾವೇ ಉತ್ಪಾದಿಸುವುದರ ಜೊತೆಗೆ ಅಂತರ್ಜಲ ವೃದ್ಧಿ ಸಾಧ್ಯ. ಕೃಷಿಯಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಲು ಹೊರಟ ಶಾಸಕ ರಘುಪತಿ ಭಟ್ ಅವರ ಕಾರ್ಯ ಶ್ಲಾಘನೀಯ ಎಂದರು.

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಲ್ಲೂ ಹಡಿಲು ಭೂಮಿ ಕೃಷಿ ಬಗ್ಗೆ ಯುವಜನತೆ ಉತ್ಸುಕರಾಗಿದ್ದು, ಅವರನ್ನು ಪ್ರೋತ್ಸಾಹಿಸುವುದಾಗಿ ತಿಳಿಸಿದರು.

ಕಲ್ಯಾಣಪುರ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಪದ್ಮನಾಭ ಕಿಣಿ, ಮೌಂಟ್ ರೋಸರಿ ಚರ್ಚ್ ಧರ್ಮಗುರು ವಂ| ಲೆಸ್ಲಿ ಡಿ’ಸೋಜಾ, ಮಿಲಾಗ್ರಿಸ್ ಚರ್ಚ್ ಧರ್ಮಗುರು ವಂ| ವಲೇರಿಯನ್ ಮೆಂಡೋನ್ಸಾ, ಧರ್ಮಪ್ರಾಂತ್ಯದ ವಂ| ರೋಮಿಯೋ ಲೂಯಿಸ್, ಉಡುಪಿ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಶನ್ ಅಧ್ಯಕ್ಷ ಜೆರ್ರಿ ವಿನ್ಸೆಂಟ್ ಡಯಾಸ್, ಶಾಸಕ ಕೆ. ರಘುಪತಿ ಭಟ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ದೇವಾಡಿಗ, ಉಪಾಧ್ಯಕ್ಷ ಉದಯ ಪೂಜಾರಿ, ಕೇದಾರೋತ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸದಸ್ಯ ದಿನಕರಬಾಬು, ಸ್ಥಳೀಯರಾದ ಸಾಧು ಪೂಜಾರಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ ಮೊದಲಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!