Thursday, July 7, 2022
Home ಲೋಕಾಭಿರಾಮ ಆರಂಬ ಸ್ವತಃ ನೇಜಿ ನೆಟ್ಟ ಶಾಸಕ ಭಟ್

ಸ್ವತಃ ನೇಜಿ ನೆಟ್ಟ ಶಾಸಕ ಭಟ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಅಂದೋಲನದಡಿ ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 110 ಎಕರೆ ಹಡಿಲು ಭೂಮಿಯನ್ನು ಕೇದಾರೋತ್ಥಾನ ಟ್ರಸ್ಟ್ ಮೂಲಕ ಕೃಷಿ ಮಾಡಲಾಗುತ್ತಿದೆ. ಈಗಾಗಲೇ ಕೆಲವು ಭಾಗಗಳಲ್ಲಿ ನಾಟಿ ಕಾರ್ಯ ಭರದಿಂದ ಸಾಗುತ್ತಿದ್ದು, ಮಂಗಳವಾರ ಶಾಸಕ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ನಾಟಿ ಕಾರ್ಯ ವೀಕ್ಷಿಸಿ, ಸ್ಥಳೀಯರೊಂದಿಗೆ ನೇಜಿ ನೆಟ್ಟರು.

ಕೃಷಿ ಭೂಮಿ ಸುತ್ತಲಿನ ತೋಡುಗಳ ಹೂಳೆತ್ತುವುದರ ಜೊತೆಗೆ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸ್ಥಳೀಯ ಕೃಷಿಕರಿಗೆ ಸಹಕಾರ ನೀಡಲಾಗುತ್ತಿದೆ. ಈ ವಿನೂತನ ಕಾರ್ಯಕ್ರಮದಲ್ಲಿ ಸ್ಥಳೀಯ ಕೃಷಿಕರು, ಊರಿನ ಹಿರಿಯರು, ಭೂ ಮಾಲಕರು ಉತ್ಸಾಹದಿಂದ ಕೈಜೋಡಿಸಿದ್ದು, ಉತ್ತಮ ರೀತಿಯಲ್ಲಿ ಸ್ಪಂದಿಸುತ್ತ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಶಾಸಕ ಭಟ್ ಹೇಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಗೋವಿಂದರಾಜನಗರ ಬಿ.ಬಿ.ಎಂ.ಪಿ ಸದಸ್ಯ ಉಮೇಶ್ ಶೆಟ್ಟಿ, ಉದ್ಯಮಿಗಳಾದ ಉದಯ್ ಶೆಟ್ಟಿ, ಜಗದೀಶ್ ಶೆಟ್ಟಿ, ಪ್ರವೀಣ್ ರೈ ಮತ್ತು ಪ್ರವೀಣ್, ಕಡೆಕಾರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಸದಸ್ಯರಾದ ಪ್ರಶಾಂತ್ ಸಾಲ್ಯಾನ್ ಮತ್ತು ವಸಂತ ಪಡುಕೆರೆ, ಕಡೆಕಾರ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಘುನಾಥ ಕೋಟ್ಯಾನ್, ಅಂಬಲಪಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಉಮೇಶ್ ಪೂಜಾರಿ, ಸ್ಥಳೀಯರಾದ ರಿಕೇಶ್, ಕೇದಾರೋತ್ಥಾನ ಟ್ರಸ್ಟ್ ಕೋಶಾಧಿಕಾರಿ ರಾಘವೇಂದ್ರ ಕಿಣಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!