Thursday, July 7, 2022
Home ಲೋಕಾಭಿರಾಮ ಆರಂಬ ಕಡೆಕಾರು: ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಕಡೆಕಾರು: ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 140 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಬುಧವಾರ ಕಡೆಕಾರು ಪಟೇಲ್ ತೋಟದಬೈಲಿನಲ್ಲಿ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಉದ್ಯಮಿಗಳಾದ ಗುರ್ಮೆ ಸುರೇಶ್ ಶೆಟ್ಟಿ, ರವಿರಾಜ್ ಕಿದಿಯೂರು ಮತ್ತು ಎರ್ಮಾಳು ಶಶಿಧರ್ ಶೆಟ್ಟಿ ಕಡೆಕಾರು ಬಬ್ಬುಸ್ವಾಮಿ ದೈವಸ್ಥಾನ ಅಧ್ಯಕ್ಷ ಮುರಳಿ ಶೆಟ್ಟಿ ಹಾಗೂ ಕಡೆಕಾರು ಬಿಲ್ಲವ ಸೇವಾ ಸಂಘ ಅಧ್ಯಕ್ಷ ಗೋಪಾಲ ಪೂಜಾರಿ ಜೊತೆಗೂಡಿ ಶಾಸಕ ರಘುಪತಿ ಭಟ್ ಭೂಮಿಗೆ ಹಾಲೆರೆದು ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿ, ಸ್ಥಳೀಯರೊಂದಿಗೆ ನೇಜಿ ನೆಟ್ಟರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಕಡೆಕಾರ್ ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಕಪ್ಪೆಟ್ಟು ಮತ್ತು ಸುಮಂಗಳ, ಸ್ಥಳೀಯರಾದ ರಿಕೇಶ್, ಕೇದಾರೋತ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!