Monday, July 4, 2022
Home ಸಮಾಚಾರ ರಾಜ್ಯ ವಾರ್ತೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಸುದ್ದಿಕಿರಣ ವರದಿ
ಶನಿವಾರ, ಜೂನ್ 18

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿರುವ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ.

ಈ ಬಾರಿ ಶೇ. 61.88ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ ಅವರು, ಈ ವರ್ಷ ಒಟ್ಟು 5,99,794 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಲ್ಲಿ 4.02,697 ಮಂದಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಉಡುಪಿ ಮತ್ತು ದ.ಕ. ಜಿಲ್ಲೆ ಫಲಿತಾಂಶದಲ್ಲಿ ಮುಂಚೂಣಿಯಲ್ಲಿದ್ದು, ಗ್ರಾಮಾಂತರ ಭಾಗದ ಶೇ. 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ನಗರ ಪ್ರದೇಶದ ಶೇ. 61.78 ಮಂದಿ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಸಚಿವ ನಾಗೇಶ್ ತಿಳಿಸಿದರು.

ಫಲಿತಾಂಶವನ್ನು ಇಲಾಖೆ ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದ್ದು, ಎಲ್ಲಾ ಕಾಲೇಜುಗಳಿಗೆ ತಲುಪಿಸಲಾಗುವುದು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!