Saturday, July 2, 2022
Home ಲೋಕಾಭಿರಾಮ ಡಾ| ಎಕ್ಕಾರು ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲ

ಡಾ| ಎಕ್ಕಾರು ತೆಂಕನಿಡಿಯೂರು ಕಾಲೇಜು ಪ್ರಾಂಶುಪಾಲ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
********************************

(ಸುದ್ದಿಕಿರಣ ವರದಿ)

ಉಡುಪಿ, ಜು. 5: ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಪ್ರಾಂಶುಪಾಲರಾಗಿ ಡಾ| ಗಣನಾಥ ಶೆಟ್ಟಿ ಎಕ್ಕಾರು ಅಧಿಕಾರ ಸ್ವೀಕರಿಸಿದ್ದಾರೆ.

ಈಚೆಗೆ ಸೇವಾ ನಿವೃತ್ತರಾಗಿರುವ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧಿಕಾರ ಹಸ್ತಾಂತರಿಸಿದರು.

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ವಸಂತರಾಜ ಶೆಟ್ಟಿ ಇದ್ದರು.

ಡಾ| ಎಕ್ಕಾರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಎನ್.ಎಸ್.ಎಸ್. ಕೋಶದಲ್ಲಿ ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಮತ್ತು ಸರ್ಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿಯಾಗಿ 6 ವರ್ಷ ಕಾರ್ಯನಿರ್ವಹಿಸಿದ್ದರು. ಕಾಲೇಜು ಶಿಕ್ಷಣ ಇಲಾಖೆಯ ವಿವಿಧ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ, ಸಹ ಪ್ರಾಧ್ಯಾಪಕರಾಗಿ, ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ 4 ವರ್ಷ ಸೇವೆ ಸಲ್ಲಿಸಿದ್ದಾರೆ.

ಜಾನಪದ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಅವರು ಅನೇಕ ಕೃತಿಗಳನ್ನು ಪ್ರಕಟಿಸಿದ್ದಾರೆ.

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ, ಮಂಗಳೂರು ವಿ.ವಿ. ಎನ್.ಎಸ್.ಎಸ್. ಸಂಯೋಜನಾಧಿಕಾರಿಯಾಗಿ, ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು.

ಎನ್.ಎಸ್.ಎಸ್.ಗೆ ಸಲ್ಲಿಸಿದ ಸೇವೆಗಾಗಿ ಅವರಿಗೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಸಂಯೋಜನಾಧಿಕಾರಿ ರಾಜ್ಯ ಪ್ರಶಸ್ತಿ ಹಾಗೂ ಕೇಂದ್ರ ಸರ್ಕಾರದಿಂದ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!