Monday, July 4, 2022
Home ಲೋಕಾಭಿರಾಮ ಗುರು ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲು ಕರೆ

ಗುರು ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲು ಕರೆ

ಉಡುಪಿ: ವಿದ್ಯಾರ್ಥಿಗಳು ವಿದ್ಯೆಯಿಂದ ವಿನಯ ಬೆಳೆಸಿಕೊಳ್ಳಬೇಕು. ಗುರು ಹಿರಿಯರನ್ನು ಗೌರವಿಸುವ ಗುಣ ವಿದ್ಯಾರ್ಥಿಗಳಲ್ಲಿ ಮೂಡಿಬರಬೇಕು ಎಂದು ಅದಮಾರು ಮಠ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇಲ್ಲಿನ ಪೂರ್ಣಪ್ರಜ್ಞ ಕಾಲೇಜಿನ 2020- 21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು ಉದ್ಘಾಟಿಸಿದರು.

ನಮ್ಮ ಜೀವನ ಶೈಲಿಯಲ್ಲಿಯೂ ಬದಲಾವಣೆಯಾಗಿದೆ. ಆ ಕಾರಣದಿಂದಾಗಿಯೇ ಕೊರೊನಾದಂಥ ಮಾರಕ ರೋಗಗಳು ಹರಡುವಂತಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ಜೀವನ ಶೈಲಿ, ಆಹಾರ ಪದ್ಧತಿ, ಚಿಂತನೆಗಳತ್ತ ಯುವಜನರು ಆಸಕ್ತರಾಗಬೇಕು ಎಂದರು.

ಕಾಲೇಜಿನ ಗೌರವ ಕಾರ್ಯದರ್ಶಿ ಡಾ. ಜಿ. ಎಸ್. ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಪ್ರಸಾದ್ ರಾವ್ ತಮ್ಮ ಕಾಲೇಜಿನ ದಿನಗಳ ಅನುಭವ ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲ ಡಾ| ರಾಘವೇಂದ್ರ ಎ. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಉಪಪ್ರಾಂಶುಪಾಲ ಡಾ| ಪ್ರಕಾಶ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸುಮನಾ ರಾಜೇಂದ್ರ ಮತ್ತು ಡಾ| ರಮೇಶ್ ಟಿ. ಎಸ್., ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಸೊನಾಲಿ ಪಿ. ಎಂ., ಶಾಲಿನಿ ಡಿ. ನಾಯಕ್, ಸೋನಿಕಾ ಅಮೀನ್ ಮತ್ತು ಶ್ವೇತಾ ಇದ್ದರು.

ರಿಹಾ ಇಲಿಯಾಸ್ ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!