Sunday, July 3, 2022
Home ಸಮಾಚಾರ ರಾಜ್ಯ ವಾರ್ತೆ ಪಿಯುಸಿ: ಉಡುಪಿ ರಾಜ್ಯಕ್ಕೆ ದ್ವಿತೀಯ

ಪಿಯುಸಿ: ಉಡುಪಿ ರಾಜ್ಯಕ್ಕೆ ದ್ವಿತೀಯ

ಸುದ್ದಿಕಿರಣ ವರದಿ
ಶನಿವಾರ, ಜೂನ್ 18

ಪಿಯುಸಿ: ಉಡುಪಿ ರಾಜ್ಯಕ್ಕೆ ದ್ವಿತೀಯ
ಉಡುಪಿ: ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿನಿ ಭವ್ಯಾ ನಾಯಕ್ 597 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯೋದಯ ಪಿಯು ಕಾಲೇಜಿನ ಓಂಕಾರ್ ಪ್ರಭು (596) ಮತ್ತು ಕಾರ್ಕಳ ಭುವನೇಂದ್ರ ಪಿಯು ಕಾಲೇಜಿನ ಯು. ಎಸ್. ಅದ್ವೈತ್ ಶರ್ಮ (596) ತೃತೀಯ ಸ್ಥಾನ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಶೇ. 86.38 ಫಲಿತಾಂಶ ಲಭಿಸಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!