Thursday, July 7, 2022
Home ಲೋಕಾಭಿರಾಮ ಆರೋಗ್ಯ ಜ. 10ರಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಹೊರರೋಗಿ ಸೇವೆ

ಜ. 10ರಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಹೊರರೋಗಿ ಸೇವೆ

ಸುದ್ದಿಕಿರಣ ವರದಿ
ಗುರುವಾರ, ಜನವರಿ 6, 2022

ಜ. 10ರಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಹೊರರೋಗಿ ಸೇವೆ
ಉಡುಪಿ: ಇಲ್ಲಿನ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಜ. 10ರಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಹೊರರೋಗಿ ಸೇವೆ ಆರಂಭವಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹೊಸ ಸೇವೆ ಪ್ರತೀ ಸೋಮವಾರ ಅಪರಾಹ್ನ 2ರಿಂದ ಸಂಜೆ 5ರ ವರೆಗೆ ಲಭ್ಯವಿರುತ್ತದೆ. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ (ಕೆಎಂಸಿ)ಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗ ಮುಖ್ಯಸ್ಥ ಡಾ. ನವೀನ ಕುಮಾರ್ ಎ.ಎನ್. ನೇತೃತ್ವದ ತಂಡ ಎಲ್ಲಾ ವಿಧದ ಕ್ಯಾನ್ಸರ್ ಸಮಾಲೋಚನೆಗಾಗಿ ಲಭ್ಯವಿರುತ್ತದೆ.

ಕ್ಯಾನ್ಸರ್ ನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರಿಂದ ಅದನ್ನು ಸಂಪೂರ್ಣವಾಗಿ ಗುಣಪಡಿಸುವ ಸಾಧ್ಯತೆ ಇದೆ. ಈ ಸೇವೆ ಉಡುಪಿಯಲ್ಲಿಯೇ ಲಭ್ಯವಿರುವುದರಿಂದ ಸುಲಭದಲ್ಲಿಯೇ ಉಡುಪಿ ನಾಗರಿಕರಿಗೆ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯ ದೊರಕಿದಂತಾಗಿದೆ. ಅಗತ್ಯವುಳ್ಳವರು ಈ ಸೇವೆ ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿ ಮತ್ತು ಪೂರ್ವ ನಿಗದಿಗಾಗಿ 7259032864ನ್ನು ಸಂಪರ್ಕಿಸುವಂತೆ ಡಾ. ಶಶಕಿರಣ್ ಉಮಾಕಾಂತ್ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!