Monday, August 15, 2022
Home ಲೋಕಾಭಿರಾಮ ಆರೋಗ್ಯ ಉಚಿತ ಬೋಸ್ಟರ್ ಡೋಸ್ ನೀಡಲು ಕೇಂದ್ರ ನಿರ್ಧಾರ

ಉಚಿತ ಬೋಸ್ಟರ್ ಡೋಸ್ ನೀಡಲು ಕೇಂದ್ರ ನಿರ್ಧಾರ

ಸುದ್ದಿಕಿರಣ ವರದಿ
ಗುರುವಾರ, ಜುಲೈ 14

ಉಚಿತ ಬೋಸ್ಟರ್ ಡೋಸ್ ನೀಡಲು ಕೇಂದ್ರ ನಿರ್ಧಾರ
ನವದೆಹಲಿ: 75ನೇ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ಮುಂದಿನ 75 ದಿನಗಳ ಕಾಲ ದೇಶಾದ್ಯಂತ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೋವಿಡ್ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಿದೆ.

ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಅನುರಾಗ್ ಠಾಕೂರ್, ಆಜಾದಿ ಕಾ ಅಮೃತ್ಸವ ಮಹೋತ್ಸವ ನಿಮಿತ್ತ ಈ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ 15ರಿಂದ ಮುಂದಿನ 75 ದಿನಗಳ ವರೆಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸೌಲಭ್ಯ ಎಲ್ಲರಿಗೂ ಲಭ್ಯವಿದ್ದು, ಸರ್ಕಾರಿ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಸಿಗಲಿದೆ. ಕೋವಿಡ್ ನ ಎರಡನೇ ಡೋಸ್ ಪಡೆದ ಆರು ತಿಂಗಳ ಬಳಿಕ ಫಲಾನುಭವಿಗಳು ಮುನ್ನೆಚ್ಚರಿಕೆ ಡೋಸ್ ಪಡೆದುಕೊಳ್ಳಬಹುದು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!