Thursday, July 7, 2022
Home ಲೋಕಾಭಿರಾಮ ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

(ಸುದ್ದಿಕಿರಣ ವರದಿ)
ಮಂಗಳೂರು: ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ ವೈ., ಹರೀಶ್ ಪೂಂಜಾ ಮತ್ತು ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್.ಒ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!