ಉಡುಪಿ: ಗೃಹ ರಕ್ಷಕ ದಳ ಜಿಲ್ಲಾ ಸಮಾದೇಷ್ಟ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ದೊರಕಿದೆ.
2013ರಿಂದ ಜಿಲ್ಲಾ ಸಮಾದೇಷ್ಟರಾಗಿ ಸೇವೆ ಸಲ್ಲಿಸುತ್ತಿರುವ ಅವರ ಸೇವಾವಧಿಯಲ್ಲಿ 150 ಮಂದಿ ಹೊಸ ಗೃಹ ರಕ್ಷಕರನ್ನು ಸೇರ್ಪಡೆ ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ, ಶ್ರೀಲಂಕಾ ಪ್ರಧಾನಿ ಭೇಟಿ ಹಾಗೂ ಪರ್ಯಾಯ ಸಂದರ್ಭದಲ್ಲಿ ಕಾನೂನು ಪಾಲನೆ ಜವಾಬ್ದಾರಿ ನಿರ್ವಹಿಸಿದ್ದಾರೆ.
ಕಾಪುನಲ್ಲಿ ಪ್ರಶಾಂತ ಆಸ್ಪತ್ರೆ ಹಾಗೂ ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಅವರ ವೃತ್ತಿ ಸೇವೆ ಹಾಗೂ ಸಮಾಜಸೇವೆ ಪರಿಗಣಿಸಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದ್ದು, ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇದ್ದರು