Thursday, July 7, 2022
Home ಲೋಕಾಭಿರಾಮ ಮಯೂರವರ್ಮ ಪ್ರಶಸ್ತಿಗೆ ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆ

ಮಯೂರವರ್ಮ ಪ್ರಶಸ್ತಿಗೆ ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆ

ಮಯೂರವರ್ಮ ಪ್ರಶಸ್ತಿಗೆ ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆ

(ಸುದ್ದಿಕಿರಣ ವರದಿ)
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಂಯುಕ್ತವಾಗಿ ನೀಡುವ 2021ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿಗೆ ಉಡುಪಿಯ ಸಾಹಿತಿ
ಡಾ| ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆಯಾಗಿದ್ದಾರೆ.

ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಗಣನೀಯ ಸಾಧನೆ ಮಾಡಿರುವ 45 ವರ್ಷದೊಳಗಿನ ಯುವ ಸಾಹಿತಿಗಳಿಗೆ ನೀಡುವ ಪ್ರಶಸ್ತಿ ಇದಾಗಿದ್ದು, ಪ್ರಶಸ್ತಿ 25 ಸಾವಿರ ರೂ. ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಫಲಕ ಒಳಗೊಂಡಿದೆ.

ಡಾ| ಕಾತ್ಯಾಯಿನಿ ಪ್ರಸ್ತುತ ಉಡುಪಿ ಎಂ.ಜಿ.ಎಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!