ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************
(ಸುದ್ದಿಕಿರಣ ವರದಿ)
ಮಲ್ಪೆ, ಜು. 8: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕೊಡವೂರು ವಾರ್ಡಿನಲ್ಲಿ 3 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ಜುಮಾದಿನಗರ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ದ.ಕ. ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ. ರವಿರಾಜ್ ಹೆಗ್ಡೆ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಕೆ. ಟಿ. ಪೂಜಾರಿ ಭೂಮಿಗೆ ಹಾಲೆರೆದು ನೇಜಿ ನೀಡುವ ಮೂಲಕ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.
ರವಿರಾಜ್ ಹೆಗ್ಡೆ ಮಾತನಾಡಿ, ಕೃಷಿ ಭೂಮಿಯ ಸುತ್ತಮುತ್ತಲಿನ ತೋಡುಗಳ ಹೂಳೆತ್ತಿ ಅಭಿವೃದ್ಧಿಗೊಳಿಸಿದ್ದರಿಂದಾಗಿ ಅನೇಕರು ಪ್ರೇರಿತರಾಗಿ ಕೃಷಿ ಚಟುವಟಿಕೆಯನ್ನು ಪುನಃ ಆರಂಭಿಸಿದ್ದಾರೆ. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಭೂಮಿ ಹಸನಾಗಿಸುತ್ತಿರುವುದು ಮಾದರಿ ಕೆಲಸ ಎಂದರು.
ನಗರಸಭಾ ಸದಸ್ಯ ವಿಜಯ್ ಕೊಡವೂರು, ಸ್ಥಳೀಯರಾದ ಪ್ರಭಾತ್ ಕೊಡವೂರು, ಕೇದಾರೋತ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ ಮೊದಲಾದವರಿದ್ದರು.