Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಗಿರೀಶ್ ಕಾಸರವಳ್ಳಿಗೆ 'ವಿಶ್ವಪ್ರಭಾ' ಪುರಸ್ಕಾರ

ಗಿರೀಶ್ ಕಾಸರವಳ್ಳಿಗೆ ‘ವಿಶ್ವಪ್ರಭಾ’ ಪುರಸ್ಕಾರ

ಸುದ್ದಿಕಿರಣ ವರದಿ
ಬುಧವಾರ, ಜನವರಿ 12, 2022

ಗಿರೀಶ್ ಕಾಸರವಳ್ಳಿಗೆ ‘ವಿಶ್ವಪ್ರಭಾ’ ಪುರಸ್ಕಾರ
ಉಡುಪಿ: ಕನ್ನಡ ನಾಡು ನುಡಿ ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿರುವ ಕಲಾವಿದರಿಗೆ ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಶ್ರಯದಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ, ಉದ್ಯಮಿ ವಿಶ್ವನಾಥ ಶೆಣೈ ಹಾಗೂ ಪ್ರಭಾವತಿ ವಿಶ್ವನಾಥ ಶೆಣೈ ಪ್ರಾಯೋಜಕತ್ವದಲ್ಲಿ ಪ್ರತಿ ವರ್ಷ ನೀಡುವ ವಿಶ್ವಪ್ರಭಾ ಪುರಸ್ಕಾರ ಈ ವರ್ಷ ಕನ್ನಡದ ಹೆಸರಾಂತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ನೀಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಂಚಾಲಕ ಮರವಂತೆ ನಾಗರಾಜ್ ಹೆಬ್ಬಾರ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡ ಸಿನಿಮಾ ಜಗತ್ತಿನಲ್ಲಿ ಈಗಾಗಲೇ 15 ಚಲನಚಿತ್ರಗಳನ್ನು ನಿರ್ದೇಶಿಸಿರುವ ಕಾಸರವಳ್ಳಿ, ತಮ್ಮ ಅಷ್ಟೂ ಚಲನಚಿತ್ರಗಳಿಗೆ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವುದು ಅವರ ಅಸಾಧಾರಣ ಪ್ರತಿಭೆಗೆ ಸಾಕ್ಷಿ.
16 ಬಾರಿ ರಾಷ್ಟ್ರಪತಿಯವರಿಂದ ಕಮಲ ಪತ್ರ ಪ್ರಶಸ್ತಿ ಪಡೆದಿರುವ ಕಾಸರವಳ್ಳಿ, 4 ಬಾರಿ ಸ್ವರ್ಣಕಮಲ ಪ್ರಶಸ್ತಿಯನ್ನೂ ಪಡೆದಿದ್ದಾರೆ ಎಂದು ಹೆಬ್ಬಾರ್ ವಿವರಿಸಿದರು.

ಜ. 31ರಂದು ಪ್ರದಾನ
ಪ್ರಶಸ್ತಿ 1 ಲಕ್ಷ ರೂ. ನಗದು ಹಾಗೂ ಪ್ರಶಸ್ತಿಪತ್ರ ಸಹಿತ ಸಂಮಾನ ಒಳಗೊಂಡಿದೆ. ಈ ತಿಂಗಳ 31ರಂದು ಇಲ್ಲಿನ ಎಂ.ಜಿ.ಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಾರಂಭದಲ್ಲಿ ವಿಶ್ವಪ್ರಭಾ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ನಾಗರಾಜ ಹೆಬ್ಬಾರ್ ತಿಳಿಸಿದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಗೌರವಾಧ್ಯಕ್ಷ ಯು. ವಿಶ್ವನಾಥ ಶೆಣೈ, ಅಧ್ಯಕ್ಷ ಜಾದೂಗಾರ ಪ್ರೊಫೆಸರ್ ಶಂಕರ್, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ ಹಾಗೂ ಸಂಚಾಲಕ ರಂಗಕರ್ಮಿ ರವಿರಾಜ್ ಎಚ್. ಪಿ. ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!