Sunday, July 3, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಬ್ಯಾಂಕಿಂಗ್ ಸೇವೆಗೆ ಪೋರ್ಟಲ್

ಬ್ಯಾಂಕಿಂಗ್ ಸೇವೆಗೆ ಪೋರ್ಟಲ್

ಸುದ್ದಿಕಿರಣ ವರದಿ
ಮಂಗಳವಾರ, ಜೂನ್ 7

ಬ್ಯಾಂಕಿಂಗ್ ಸೇವೆಗೆ ಪೋರ್ಟಲ್
ಮಣಿಪಾಲ: ನವದೆಹಲಿಯ ವಿಜ್ಞಾನ ಭವನದಲ್ಲಿ ಸೋಮವಾರ ನಡೆದ ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಸೆಲೆಬ್ರೇಷನ್ ಉದ್ಘಾಟನೆಯ ನೇರಪ್ರಸಾರ ಕಾರ್ಯಕ್ರಮ ಇಲ್ಲಿನ ಕೆನರಾ ಬ್ಯಾಂಕ್ ಸಿಂಡಿಕೇಟ್ ಗೋಲ್ಡನ್ ಜ್ಯೂಬಿಲಿ ಸಭಾಂಗಣದಲ್ಲಿ ನಡೆಯಿತು.

ಆಜಾದಿ ಕಾ ಅಮೃತ್ ಮಹೋತ್ಸವ ಆಚರಿಸುತ್ತಿರುವ ದೇಶದ 75 ನಗರಗಳಲ್ಲಿ ಉಡುಪಿಯೂ ಒಂದಾಗಿದ್ದು ಬ್ಯಾಂಕ್ ಗಳು, ಸಾರ್ವಜನಿಕ ವಿಮಾ ಕಂಪೆನಿಗಳು ಹಾಗೂ ಕೇಂದ್ರ ಸರ್ಕಾರದ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಜನಸಮರ್ಥ ಪೋರ್ಟಲ್ ಅನಾವರಣಗೊಳಿಸುವ ಮೂಲಕ ಸಾಮಾನ್ಯ ಜನರಿಗೆ ಬ್ಯಾಂಕ್ ಗಳ ಮೂಲಕ ಜಾರಿಗೊಳಿಸಲಾಗಿರುವ ಕ್ರೆಡಿಟ್ ಲಿಂಕ್ಡ್ ಸರ್ಕಾರದ ಯೋಜನೆಗಳ ವಿವರ ತಿಳಿಸಿದರು.

ಕೆನರಾ ಬ್ಯಾಂಕ್ ಜನರಲ್ ಮ್ಯಾನೆಜರ್ ರಾಮಾ ನಾಯಕ್ ಮಾತನಾಡಿ, ರಾಷ್ಟ್ರದಾದ್ಯಂತ ನಡೆಯುತ್ತಿರುವ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಅದೃಷ್ಟ ಉಡುಪಿಗೆ ಲಭಿಸಿದೆ.

ಜಿಲ್ಲೆಯ ಎಲ್ಲ ಅರ್ಹ ನಾಗರಿಕರನ್ನು ಪಿಎಂಜೆಜೆಬಿವೈ, ಪಿಎಂಎಸ್.ಬಿವೈ, ಪಿಎಂಎಸ್ ನಿಧಿ, ಮುದ್ರಾ, ಪಿಎಂಎಫ್.ಎಂಇ, ಸ್ಟ್ಯಾಂಡಪ್ ಮತ್ತು ಸ್ಟಾರ್ಟ್ ಅಪ್ ಸೇರಿದಂತೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಡಿ ಸೇರಿಸೋಣ ಎಂದು ಕರೆ ನೀಡಿದರು.

ರಾಜ್ಯ ಮಟ್ಟದ ಬ್ಯಾಂಕರ್ ಗಳ ಸಮಿತಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಎಸ್.ಎಲ್.ಬಿಸಿ ಪರವಾಗಿ ಟಿ.ಎಸ್. ವಾಸುದೇವ ತಾತಾಚಾರ್ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಿಂದ ಆಯೋಜಿಸಿದ್ದ ಕಾರ್ಯಕ್ರಮ 75 ಜಿಲ್ಲೆಗಳಲ್ಲಿ ನೇರ ಪ್ರಸಾರವಾಯಿತು. ಎಲ್ಲ ಬ್ಯಾಂಕಿನ ಕ್ಷೇತ್ರೀಯ ಮುಖ್ಯಸ್ಥರು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಭಾಗವಹಿಸಿದ್ದರು.

ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಪಿ.ಎಂ. ಪಿಂಜಾರ ಸ್ವಾಗತಿಸಿದರು. ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಡಿಜಿಎಂ ಲೀನಾ ಪಿಂಟೋ ವಂದಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!