Sunday, July 3, 2022
Home ಲೋಕಾಭಿರಾಮ ಪತ್ರಕರ್ತರ ಆರೋಗ್ಯ ತಪಾಸಣೆ

ಪತ್ರಕರ್ತರ ಆರೋಗ್ಯ ತಪಾಸಣೆ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಪ್ರಯುಕ್ತ ಪತ್ರಕರ್ತರ ಆರೋಗ್ಯ ತಪಾಸಣಾ ಶಿಬಿರ ಗುರುವಾರ ಸಂಘದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಇಂದಿನ ಕೊರೊನಾ ಕಾಲಘಟ್ಟದಲ್ಲಿ ಮಾನವೀಯ ಮೌಲ್ಯ ಹಾಗೂ ಸಂಬಂಧದೊಂದಿಗೆ ಇನ್ನಷ್ಟು ಜನಪರ ಕೆಲಸ ವೈದ್ಯರು ಹಾಗೂ ಪತ್ರಕರ್ತರಿಂದ ಆಗಬೇಕು. ಕೋವಿಡ್ ಸಂಕಷ್ಟ ಸಮಯದಲ್ಲಿ ಜನರನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಪತ್ರಕರ್ತರ ಸೇವೆ ಅಭಿನಂದನೀಯ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ವೈದ್ಯೆ ಡಾ. ರೋಶಿನಿ ಪೂಂಜಾ, ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಮೊದಲಾದವರಿದ್ದರು.

ಜಿಲ್ಲೆಯ ಸುಮಾರು 50ಕ್ಕೂ ಅಧಿಕ ಮಂದಿ ಪತ್ರಕರ್ತರ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆಗಳನ್ನು ವೈದ್ಯರು ನೀಡಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!