Wednesday, July 6, 2022
Home ಲೋಕಾಭಿರಾಮ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕಾರ್ಯಾಗಾರ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕಾರ್ಯಾಗಾರ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕಾರ್ಯಾಗಾರ

(ಸುದ್ದಿಕಿರಣ ವರದಿ)
ಉಡುಪಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪದವಿ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲು ಸರಕಾರ ನಿರ್ಧರಿಸಿದೆ.

ತೆಂಕನಿಡಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹೊಸ ಶಿಕ್ಷಣ ನೀತಿಯ ಕುರಿತ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಶಿಕ್ಷಣ ತಜ್ಞ ದಯಾನಂದ ಶೆಟ್ಟಿ ಕೊಜಕುಳಿ ಕಾರ್ಯಾಗಾರ ಉದ್ಘಾಟಿಸಿ, ಹೊಸ ಶಿಕ್ಷಣ ನೀತಿಯ ಅನುಷ್ಠಾನದ ಅಗತ್ಯವನ್ನು ವಿವರಿಸಿದರು.

ಪ್ರಾಂಶುಪಾಲ ಡಾ| ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲವ್ಯಕ್ತಿಯಾಗಿದ್ದ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ| ಗೋಪಾಲಕೃಷ್ಣ ಎಂ. ಗಾಂವ್ಕರ್ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ರೀತಿಯನ್ನು ವಿವರಿಸಿದರು. ಐ.ಕ್ಯೂ.ಎ.ಸಿ. ಸಂಯೋಜಕ ಡಾ| ಸುರೇಶ್ ರೈ ಕೆ. ಮತ್ತು ಎನ್.ಇ.ಪಿ ಸಂಯೋಜಕ ಡಾ| ರಾಜಶೇಖರ್ ಕುಂಬಾರ ಉಪಸ್ಥಿತರಿದ್ದರು.

ಎನ್.ಇ.ಪಿ ಟಾಸ್ಕ್ ಫೋರ್ಸ್ ಮುಖ್ಯಸ್ಥೆ ಡಾ| ಸುನೀತಾ ವಿ. ಸ್ವಾಗತಿಸಿ, ಉಮೇಶ್ ಪೈ ವಂದಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶರ್ಮಿಳಾ ಹಾರಾಡಿ ನಿರೂಪಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!