Sunday, July 3, 2022
Home ಲೋಕಾಭಿರಾಮ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹೊಸ ಕೋರ್ಸ್

ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹೊಸ ಕೋರ್ಸ್

ಕುಂದಾಪುರ, ಜು. 11 (ಸುದ್ದಿಕಿರಣ ವರದಿ): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನ ಭರಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷೀನ್ ಲರ್ನಿಂಗ್ ತಂತ್ರಜ್ಞಾನದ ಹೊಸ ಕೋರ್ಸ್ ಆರಂಭಿಸಲು ಅನುಮೋದನೆ ದೊರಕಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆಯಲು ಅವಕಾಶವಿದೆ.

 

Artificial intelligence AI research of robot and cyborg development for future of people living. Digital data mining and machine learning technology design for computer brain communication.

ಪ್ರಸಕ್ತ ಆಧುನಿಕ ಯುಗದಲ್ಲಿ ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವ ಉತ್ಪನ್ನಗಳಿಗೆ ಬಹಳ ಬೇಡಿಕೆ ಇರುವುದರಿಂದ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಕಲಿಕೆ ಪ್ರಮುಖ ಪಾತ್ರ ವಹಿಸುತ್ತದೆ.

ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಂಮ್ಯುನಿಕೇಷನ್ಸ್, ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್ ಈಗಾಗಲೇ ಲಭ್ಯವಿದೆ.

ವಿದ್ಯಾರ್ಥಿಗಳಿಗೆ ವಿವಿಧ ಕಂಪೆನಿಗಳ ಉದ್ಯೋಗಾವಕಾಶಕ್ಕೆ ಪೂರಕವಾಗುವಂತೆ ಈಗಾಗಲೇ ಮೈಕ್ರೋಸಾಫ್ಟ್ ಟ್ರೈನಿಂಗ್ ಪಾರ್ಟ್ನರ್ ಮತ್ತು ಎಡೆಕ್ಸ್ ಕಂಪೆನಿಗಳೊಂದಿಗೆ ಕಾಲೇಜು ಒಪ್ಪಂದ ಮಾಡಿಕೊಂಡಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!