Saturday, July 2, 2022
Home ಲೋಕಾಭಿರಾಮ ಆತ್ಮಶ್ರೀ ರಾಜ್ಯೋತ್ಸವ ಗೌರವ ಪ್ರದಾನ

ಆತ್ಮಶ್ರೀ ರಾಜ್ಯೋತ್ಸವ ಗೌರವ ಪ್ರದಾನ

ಉಡುಪಿ: ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಯಲಹಂಕ ಉಪನಗರದಲ್ಲಿ ಈಚೆಗೆ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ ಗೌರವ ಕಾರ್ಯಕ್ರಮದಲ್ಲಿ ಉಡುಪಿ ಸಾಮಾಜಿಕ ಕಾರ್ಯಕರ್ತ, ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಅವರಿಗೆ ಸಾಮಾಜಿಕ ಸೇವೆ ಮತ್ತು ಯುವ ಸಂಘಟನೆ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಗೌರವ ಪ್ರದಾನ ಮಾಡಲಾಯಿತು.
ಸ್ವಚ್ಛ ಭಾರತ ಫ್ರೆಂಡ್ಸ್ ಸಂಯೋಜಕರಾಗಿರುವ ಅವರು ಅನೇಕ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಕೊಳದಮಠ ಶ್ರೀ ಶಾಂತವೀರ ಸ್ವಾಮೀಜಿ, ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್, ಗಾಯಕ ಪುತ್ತೂರು ನರಸಿಂಹ ನಾಯಕ್, ಗುಣವಂತ ಮಂಜು ಮುಂತಾದವರಿದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!