Thursday, July 7, 2022
Home ಲೋಕಾಭಿರಾಮ ಆರ್ಥಿಕ ದುರ್ಬಲ, ಹಿಂದುಳಿದ ವರ್ಗದವರಿಗೆ ವೈದ್ಯಕೀಯ ಶಿಕ್ಷಣದಲ್ಲಿ ಮೀಸಲಾತಿ: ಯಶಪಾಲ್ ಅಭಿಂದನೆ

ಆರ್ಥಿಕ ದುರ್ಬಲ, ಹಿಂದುಳಿದ ವರ್ಗದವರಿಗೆ ವೈದ್ಯಕೀಯ ಶಿಕ್ಷಣದಲ್ಲಿ ಮೀಸಲಾತಿ: ಯಶಪಾಲ್ ಅಭಿಂದನೆ

ಉಡುಪಿ: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ 27 ಶೇ. ಮತ್ತು ಆರ್ಥಿಕ ದುರ್ಬಲ ವರ್ಗಕ್ಕೆ 10 ಶೇ. ಮೀಸಲಾತಿಯ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಈಗಾಗಲೇ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರಕಾರ, ಇದೀಗ ಹಿಂದುಳಿದ ವರ್ಗ ಮತ್ತು ಆರ್ಥಿಕ ದುರ್ಬಲ ವರ್ಗಗಳಿಗೆ ಮೀಸಲಾತಿ ನೀಡುವ ಮೂಲಕ ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿದೆ.

ಕೇಂದ್ರ ಸರಕಾರದ ಈ ನಿರ್ಧಾರದಿಂದ ಪದವಿಪೂರ್ವ ಹಾಗೂ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ಮೀಸಲಾತಿ ಅನ್ವಯವಾಗಲಿದ್ದು, ಹಿಂದುಳಿದ ವರ್ಗಗಳ ಸುಮಾರು 4 ಸಾವಿರ ವಿದ್ಯಾರ್ಥಿಗಳು ಹಾಗೂ ಆರ್ಥಿಕ ದುರ್ಬಲ ವರ್ಗದ ಸುಮಾರು 1,550 ವಿದ್ಯಾರ್ಥಿಗಳಿಗೆ ನೆರವಾಗಲಿದೆ.

ಈ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಯಶಪಾಲ್ ಅಭಿನಂದನೆ ಸಲ್ಲಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!